HEALTH TIPS

ಕ್ಷೇತ್ರ ಮರುವಿಂಗಡಣೆಗೂ ಮುನ್ನ ಮಹಿಳಾ ಮೀಸಲಾತಿ ಜಾರಿ?

ನವದೆಹಲಿ: ಜನಗಣತಿ ನಂತರ ಲೋಕಸಭೆ ಮತ್ತು ವಿಧಾನಸಭಾ ಕ್ಷೇತ್ರಗಳ ಮರುವಿಂಗಡಣೆ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಮಹಿಳಾ ಮೀಸಲಾತಿ ಕಾಯ್ದೆಯನ್ನು ಜಾರಿಗೆ ತರುವ ಸಾಧ್ಯತೆಯ ಬಗ್ಗೆ ಕೇಂದ್ರ ಸರ್ಕಾರ ಪರಿಶೀಲಿಸುತ್ತಿದೆ.

2023ರಲ್ಲಿ ಸಂಸತ್ತು ಅಂಗೀಕರಿಸಿದ್ದ ಮಸೂದೆಗೆ ತಿದ್ದುಪಡಿ ತರಲು ಸರ್ಕಾರ ಚಿಂತನೆ ನಡೆಸುತ್ತಿದೆ.

ಆದರೆ, ಈ ಬಗ್ಗೆ ಸಚಿವ ಸಂಪುಟಕ್ಕೆ ಪ್ರಸ್ತಾವ ಸಲ್ಲಿಸಲು ಇನ್ನೂ ಯಾವುದೇ ಸೂಚನೆ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿಯನ್ನು ಸಂವಿಧಾನದ ತಿದ್ದುಪಡಿಯ ಮೂಲಕ ತರಲಾಗಿದೆ. ಆದರೆ, ಇದು ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆ ಪೂರ್ಣಗೊಂಡ ನಂತರವಷ್ಟೇ ಜಾರಿಗೆ ಬರಲಿದೆ.

ಒಂದು ವೇಳೆ ಕ್ಷೇತ್ರ ಮರುವಿಂಗಡಣೆಗಿಂತ ಮುಂಚಿತವಾಗಿಯೇ ಈ ಕಾನೂನನ್ನು ಜಾರಿಗೆ ತರಬೇಕೆಂಬ ಪ್ರಸ್ತಾವ ಸಲ್ಲಿಸಿದರೆ, ಅದಕ್ಕಾಗಿ ಸಂವಿಧಾನಕ್ಕೆ ಮತ್ತೊಂದು ತಿದ್ದುಪಡಿ ತರುವ ಅಗತ್ಯವಿರುತ್ತದೆ.

ಮಹಿಳಾ ಮೀಸಲಾತಿ ಜಾರಿಗೆ ತರುವ ಸಂಬಂಧ ಮಸೂದೆಯೊಂದನ್ನು ಮಂಡಿಸುವ ಸಾಧ್ಯತೆಯ ಬಗ್ಗೆ ಸರ್ಕಾರವು ವಿರೋಧ ಪಕ್ಷದ ಕೆಲ ನಾಯಕರಿಗೆ ಅನಧಿಕೃತವಾಗಿ ಸುಳಿವು ನೀಡಿದೆ ಎಂದು ಮೂಲಗಳು ಹೇಳಿವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries