HEALTH TIPS

ಕಾಸರಗೋಡಿನಲ್ಲಿ ಎನ್‍ಡಿಎ ಪರವಾಗಿ ಕೇಂದ್ರ ಸಚಿವ ಸುರೇಶ್‍ಗೋಪಿ ಪ್ರಚಾರಕ್ಕೆ ಚಾಲನೆ

ಕಾಸರಗೋಡು: ಕೇರಳದ ವಿಧಾನಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಎನ್‍ಡಿಎ ತನ್ನ ಪ್ರಚಾರ ಅಭಿಯಾನದ ಆರಂಭಿಸಿದ್ದು, ಬುಧವಾರ ಕಾಸರಗೋಡು ಹಾಗೂ ಮಂಜೇಶ್ವರ ಮಂಡಲದಲ್ಲಿ  ಕೇಂದ್ರ ಪ್ರವಾಸೋದ್ಯಮ ಮತ್ತು ಪೆಟ್ರೋಲಿಯಂ ರಾಜ್ಯ ಸಚಿವ ಸುರೇಶ್‍ಗೋಪಿ ಪ್ರಚಾರಕ್ಕೆ ಚಾಲನೆ ನೀಡಿದರು.   


ಕುಂಬಳೆ ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ಕಣಿಪುರೇಶನ ದರ್ಶನ ಪಡೆದ ನಂತರ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ. ಸುರೇಂದ್ರನ್ ಪರ ಕುಂಬಳೆ ಪೇಟೆಯಲ್ಲಿ  ಗೋಡೆ ಬರಹ ಬರೆಯುವ ಮೂಲಕ ಪ್ರಚಾರಕ್ಕೆ ಚಾಲನೆ ನೀಡಿದರು.  ನಂತರ ಸರೋವರ ಕ್ಷೇತ್ರ ಅನಂತಪುರ ಶ್ರೀ ಪದ್ಮನಾಭ ಸ್ವಾಮಿ ದೇವಸ್ಥಾನ ಮತ್ತು ಭರಣಿ ಮಹೋತ್ಸವ ನಡೆಯುತ್ತಿರುವ ಕಾಸರಗೋಡು ಕಡಪ್ಪುರ ಕುರುಂಬಾ ಭಗವತೀ ಕ್ಷೇತ್ರಕ್ಕೆ ಭೇಟಿ ನೀಡಿದರು. ನಂತರ ಕಾಸರಗೋಡು ನಗರ ಪೆÇಲೀಸ್ ಠಾಣೆ ವಠಾರದಲ್ಲಿ ಗೋಡೆ ಬರಹದ ಮೂಲಕ ಕಾಸರಗೋಡು ಕ್ಷೇತ್ರದಲ್ಲಿನ ಪ್ರಚಾರಕಾರ್ಯಕ್ಕೆ ಚಾಲನೆ ನೀಡಿದರು.

ಕಾಸರಗೋಡು ನಗರದಲ್ಲಿ ಕೋಯಿಕ್ಕೋಡ್ ವಲಯ ಸಮಿತಿ ಅಧ್ಯಕ್ಷ ವಕೀಲ ಕೆ.ಶ್ರೀಕಾಂತ್,   ಪ್ರಧಾನ ಕಾರ್ಯದರ್ಶಿ ಸುಧಾಮ ಗೋಸಾಡ, ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷೆ ಎಂ.ಎಲ್.ಅಶ್ವಿನಿ, ರಾಜ್ಯ ಸಮಿತಿ ಸದಸ್ಯರಾದ ಸವಿತಾ ಟೀಚರ್, ರವೀಶ ತಂತ್ರಿ ಕುಂಟಾರು, ಜಿಲ್ಲಾ ಉಪಾಧ್ಯಕ್ಷ ಪಿ.ರಮೇಶ್, ಜಿಲ್ಲಾ ಕಾರ್ಯದರ್ಶಿ ಪ್ರಮೀಳಾ ಮಜಲ್, ಜಿಲ್ಲಾ ಕೋಶಾಧಿಕಾರಿ ವೀಣಾ ಅರುಣಕುಮಾರ್.ಶೆಟ್ಟಿ, ಸೆಲ್ ಸಂಯೋಜಕ ಸುಕುಮಾರ್ ಕುದುರೆಪ್ಪಾಡಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಕೆ.ಎಸ್. ರಮಣಿ, ಮಂಡಲ ಅಧ್ಯಕ್ಷ ಗುರುಪ್ರಸಾದ್ ಪ್ರಭು, ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀಧರ ಕೂಡ್ಲೂ, ಅರುಣಕುಮಾರ ಶೆಟ್ಟಿ, ಕಿಶೋರ್ ಮೊದಲಾದವರು ನೇತೃತ್ವ ವಹಿಸಿದ್ದರು.

ಮಂಜೇಶ್ವರಂ ಕ್ಷೇತ್ರದ ಎನ್‍ಡಿಎ ಅಭ್ಯರ್ಥಿ ಕೆ. ಸುರೇಂದ್ರನ್ ಮತ್ತು ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷ ಎಂ.ಎಲ್. ಅಶ್ವಿನಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಕುಂಬಳ ಬಿಜೆಪಿ ಕ್ಷೇತ್ರ ಸಮಿತಿ ಕಚೇರಿ ಆವರಣದಲ್ಲಿ ಸುರೇಶ್ ಗೋಪಿ ಅವರನ್ನು ಸ್ವಾಗತಿಸಿ ಬರಮಾಡಿಕೊಮಡರು. 

ಬಿಜೆಪಿ ರಾಜ್ಯ ವಕ್ತಾರ ವಕೀಲ ವಿ.ಪಿ. ಶ್ರೀಪದ್ಮನಾಭನ್, ಮಂಜೇಶ್ವರ ಮಂಡಲ ಎನ್‍ಡಿಎ ಸಂಚಾಲಕ ವಿಜಯ್ ಕುಮಾರ್ ರೈ, ಬಿಜೆಪಿ ರಾಜ್ಯ ಸಮಿತಿ ಸದಸ್ಯರಾದ ವಿ.ರವೀಂದ್ರನ್, ಸುರೇಶ್ ಕುಮಾರ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಪಿ.ರಮೇಶ್, ಮಂಡಲ ಅಧ್ಯಕ್ಷ ಸುನಿಲ್ ಅನಂತಪುರ, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಲತಾ ಎಸ್, ನೇತೃತ್ವ ವಹಿಸಿದ್ದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries