ಬದಿಯಡ್ಕ: ಎಣ್ಮಕಜೆ ಹಾಗೂ ಬದಿಯಡ್ಕ ಗ್ರಾಮ ಪಂಚಾಯಿತಿಯ ಸಂಗಮ ಪ್ರದೇಶ ನೆಲ್ಲಿಕುಂಜೆಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ನವೀಕರಣ ಪುನ:ಪ್ರತಿಷ್ಠಾ ಅಷ್ಟ ಬಂಧ ಬ್ರಹ್ಮಕಲಶೋತ್ಸವ ಭಾನುವಾರ ಆರಂಭಗೊಂಡಿತು.
ಕಾರ್ಯಕ್ರಮದ ಅಂಗವಾಗಿ ಪೆರ್ಲ ಶ್ರೀ ಸತ್ಯನಾರಾಯಣ ಮಂದಿರದಿಂದ ಹಸಿರುವಾಣಿ ಹೊರೆ ಕಾಣಿಕೆ ಮೆರವಣಿಗೆ ನೆಲ್ಲಿಕುಂಜೆ ಕ್ಷೇತ್ರಕ್ಕೆ ಸಾಗಿಬಂತು. ಬ್ರಹ್ಮಕಲಶೋತ್ಸವ, ಜೀರ್ಣೋದ್ಧಾರ ಸಮಿತಿ ಹಾಗೂ ಉಪ ಸಮಿತಿ ಪದಾಧಿಕಾರಿಗಳು, ಭಕ್ತಾದಿಗಳು ಪಾಳ್ಗೊಮಡಿದ್ದರು. ಪ್ರತಿ ದಿನ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿರುವುದು.
30ರಂದು ಸಂಜೆ 4ಕ್ಕೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡುವರು. ಉಪನ್ಯಾಸಕ ಡಾ. ರವೀಶ ಪಡುಮಲೆ ಧಾರ್ಮಿಕ ಭಾಷಣ ಮಾಡುವರು.



