HEALTH TIPS

ಇರಾನ್ ಪರಮೋಚ್ಚ ನಾಯಕ ಅಯಾತೊಲ್ಲಾ ಖಮೇನಿ ಹತ್ಯೆ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಇರಾನ್ ಪರಮೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆ ಮಾಡಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

'ಖಮೇನಿ ಎಂಬ ಇತಿಹಾಸದ ಅತ್ಯಂತ ಕ್ರೂರ ವ್ಯಕ್ತಿಗಳಲ್ಲಿ ಒಬ್ಬ ಹತನಾಗಿದ್ದಾನೆ' ಎಂದು ಟ್ರಂಪ್ ತನ್ನ ಸಾಮಾಜಿಕ ಜಾಲತಾಣ 'ಟ್ರೂಥ್ ಸೋಶಿಯಲ್'ನಲ್ಲಿ ಬರೆದುಕೊಂಡಿದ್ದಾರೆ.

'ಇದು ಕೇವಲ ಇರಾನ್ ಜನರಿಗೆ ಸಂದ ಜಯ ಮಾತ್ರವಲ್ಲ, ಖಮೇನಿ ಮತ್ತು ಆತನ ರಕ್ತಪಿಪಾಸು ಗೂಂಡಾ ಪಡೆಯಿಂದ ಹತರಾದ ಅಥವಾ ಅಂಗವೈಕಲ್ಯಕ್ಕೊಳಗಾದ ಶ್ರೇಷ್ಠ ಅಮೆರಿಕನ್ನರಿಗೆ ಹಾಗೂ ವಿಶ್ವದ ವಿವಿಧ ದೇಶಗಳ ಜನರಿಗೆ ಸಿಕ್ಕ ನ್ಯಾಯ' ಎಂದು ಅವರು ಹೇಳಿದ್ದಾರೆ.

'ನಮ್ಮ ಗುಪ್ತಚರ ಮತ್ತು ಅತ್ಯಾಧುನಿಕ ಟ್ರ್ಯಾಕಿಂಗ್ ವ್ಯವಸ್ಥೆಗಳಿಂದ ತಪ್ಪಿಸಿಕೊಳ್ಳಲು ಆತನಿಗೆ ಸಾಧ್ಯವಾಗಲಿಲ್ಲ. ಇಸ್ರೇಲ್ ಜೊತೆ ನಿಕಟವಾಗಿ ಕಾರ್ಯನಿರ್ವಹಿಸಿದ ನಮಗೆ, ಆತನಾಗಲಿ ಅಥವಾ ಆತನ ಜೊತೆಗೆ ಹತರಾದ ಇತರ ನಾಯಕರಾಗಲಿ ಏನೂ ಮಾಡಲು ಸಾಧ್ಯವಾಗಲಿಲ್ಲ' ಎಂದಿದ್ದಾರೆ.

'ಇರಾನ್ ಜನರಿಗೆ ತಮ್ಮ ದೇಶವನ್ನು ಮರಳಿ ಪಡೆಯಲು ಇದು ಅತ್ಯುತ್ತಮ ಅವಕಾಶ. ಇರಾನ್‌ನ ಐಆರ್‌ಜಿಸಿ, ಸೇನೆ, ಇತರ ಭದ್ರತಾ ಹಾಗೂ ಪೊಲೀಸ್ ಪಡೆಗಳು ಇನ್ನು ಮುಂದೆ ಹೋರಾಟ ನಡೆಸಲು ಇಚ್ಛಿಸುತ್ತಿಲ್ಲ. ಅವರು ನಮ್ಮ ದಾಳಿಯಿಂದ ರಕ್ಷಣೆ ರಕ್ಷಣೆ ಬಯಸುತ್ತಿದ್ದಾರೆ ಎಂಬ ಮಾಹಿತಿ ನಮಗೆ ಲಭ್ಯವಾಗುತ್ತಿದೆ' ಎಂದು ಬರೆದುಕೊಂಡಿದ್ದಾರೆ.

'ಖಮೇನಿಯ ಸಾವು ಮಾತ್ರವಲ್ಲದೆ, ಕೇವಲ ಒಂದೇ ದಿನದಲ್ಲಿ ಆ ದೇಶವು ಬಹಳಷ್ಟು ನಾಶವಾಗಿದೆ, ಧ್ವಂಸಗೊಂಡಿದೆ. ಆದಾಗ್ಯೂ, ಮಧ್ಯಪ್ರಾಚ್ಯದಲ್ಲಿ ಮತ್ತು ಇಡೀ ವಿಶ್ವದಲ್ಲಿ ಶಾಂತಿ ಸ್ಥಾಪಿಸುವ ನಮ್ಮ ಗುರಿಯನ್ನು ಸಾಧಿಸುವವರೆಗೆ, ನಿಖರವಾದ ಮತ್ತು ಭಾರಿ ಬಾಂಬ್ ದಾಳಿಗಳು ಈ ವಾರದುದ್ದಕ್ಕೂ ಅಥವಾ ಅಗತ್ಯವಿರುವಷ್ಟು ಕಾಲ ಅಡೆತಡೆಯಿಲ್ಲದೆ ಮುಂದುವರಿಯುತ್ತವೆ' ಎಂದೂ ಟ್ರಂಪ್ ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries