HEALTH TIPS

ಕೇರಳದಲ್ಲಿ ಪ್ರಧಾನಿ ಮೋದಿ ರ‍್ಯಾಲಿ: ದಿಢೀರ್ ಕಾಣಿಸಿಕೊಂಡ ಹೊಗೆ, ಕೆಲಕಾಲ ಆತಂಕ ಸೃಷ್ಟಿ!

 ಕೊಚ್ಚಿ: ಕೇರಳ ಚುನಾವಣೆ ನಿಮಿತ್ತ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡಿದ್ದ ವೇಳೆ ದಿಢೀರ್ ಕಾಣಿಸಿಕೊಂಡ ಹೊಗೆ ಕೆಲಕಾಲ ಆತಂಕ ಸೃಷ್ಟಿಸಿತ್ತು.




ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಜನತಾ ಪಕ್ಷದ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ನಿಗದಿಯಾಗಿದ್ದ ಸ್ಥಳದಲ್ಲಿ ದಿಢೀರ್ ಹೊಗೆ ಕಾಣಿಸಿಕೊಂಡಿದ್ದು, ಹೊಗೆ ಎಲ್ಲಿಂದ ಬರುತ್ತಿದೆ ಎಂಬುದು ತಿಳಿಯದೇ ಅಧಿಕಾರಿಗಳು ಕೆಲಕಾಲ ಆತಂಕಕ್ಕೊಳಗಾಗಿದ್ದರು.

ಅಧಿಕಾರಿಗಳ ಪರಿಶೀಲನೆ ಬಳಿಕ ಅಳವಡಿಸಲಾಗಿದ್ದ ಆಂಪ್ಲಿಫೈಯರ್ ನಿಂದ ಹೊಗೆ ಬರುತ್ತಿದೆ ಎಂದು ಕಂಡುಕೊಂಡಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಆಂಪ್ಲಿಫೈಯರ್ ನಿಂದ ಹೊಗೆ ಬರಲಾರಂಭಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಪ್ರಧಾನಿ ಪಾಲಕ್ಕಾಡ್ ನ ರ‍್ಯಾಲಿ ಸ್ಥಳವಾದ ಕೊಟ್ಟಮೈಡನಂಗೆ ಆಗಮಿಸುವ ಸ್ವಲ್ಪ ಸಮಯದ ಮೊದಲು ಈ ಘಟನೆ ಸಂಭವಿಸಿದೆ. ಧ್ವನಿ ವ್ಯವಸ್ಥೆ ನಿರ್ವಾಹಕರು ಮತ್ತು ಪೊಲೀಸ್ ಸಿಬ್ಬಂದಿ ತಕ್ಷಣ ಮಧ್ಯಪ್ರವೇಶಿಸಿ ಆಂಪ್ಲಿಫೈಯರ್ ಅನ್ನು ತೆಗೆದುಹಾಕಿದರು. 









ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries