ಅಬುಧಾಬಿ: ಯುಎಇ ಭದ್ರತಾ ಪಡೆ ಹೊಡೆದುರುಳಿಸಿದ ಬ್ಯಾಲಿಸ್ಟಿಕ್ ಕ್ಷಿಪಣಿಯ ಅವಶೇಷಗಳು ಬಿದ್ದು ಭಾರತೀಯ ಪ್ರಜೆಯೊಬ್ಬರು ಗಾಯಗೊಂಡಿದ್ದಾರೆ ಎಂದು ಅಬುಧಾಬಿ ಮಾಧ್ಯಮ ಕಚೇರಿ ಸೋಮವಾರ ತಿಳಿಸಿದೆ.
ಈ ಘಟನೆ ಅಬುಧಾಬಿಯ ಅಲ್ ಶವಾಮೆಖ್ ಪ್ರದೇಶದಲ್ಲಿ ನಡೆದಿದೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅಬುಧಾಬಿ ಮಾಧ್ಯಮ ಕಚೇರಿ, ವಾಯು ರಕ್ಷಣಾ ವ್ಯವಸ್ಥೆಗಳು ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಯಶಸ್ವಿಯಾಗಿ ತಡೆದ ನಂತರ ಅಲ್ ಶವಾಮೇಖ್ ಪ್ರದೇಶದಲ್ಲಿ ಅವಶೇಷಗಳು ಬಿದ್ದು ಭಾರತೀಯ ಪ್ರಜೆಯೊಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ.
ಸಾರ್ವಜನಿಕರು ಅಧಿಕೃತ ಮೂಲಗಳಿಂದ ಮಾತ್ರ ಮಾಹಿತಿಯನ್ನು ಪಡೆಯಬೇಕು. ವದಂತಿ ಅಥವಾ ಪರಿಶೀಲಿಸದ ಮಾಹಿತಿಯನ್ನು ಹರಡುವುದನ್ನು ತಪ್ಪಿಸಬೇಕು ಎಂದು ಹೇಳಿದೆ.
ಮಧ್ಯಪ್ರಾಚ್ಯ ಸಂಘರ್ಷ ಮುಂದುವರಿದಿರುವ ಮಧ್ಯೆ 25 ಯುಎವಿಗಳು, 4 ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹೊಡೆದುರುಳಿಸಿರುವುದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ) ಭಾನುವಾರ ತಿಳಿಸಿತ್ತು.

