ನವದೆಹಲಿ: 1949ರ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಯಲ್ಲಿನ 'ಬ್ಯಾಂಕಿಂಗ್ ಕಂಪನಿ' ವ್ಯಾಖ್ಯಾನದ ವ್ಯಾಪ್ತಿಯಲ್ಲಿ ಬರುವ ಎಲ್ಲ ಹಣಕಾಸು ಸಂಸ್ಥೆಗಳು ₹ 50,000ಕ್ಕಿಂತ ಹೆಚ್ಚಿನ ಮೊತ್ತದ ಬಡ್ಡಿ ವರಮಾನದ ಮೇಲೆ ಇನ್ನು ಮೂಲದಲ್ಲೇ ತೆರಿಗೆ ಕಡಿತ (ಟಿಡಿಎಸ್) ಮಾಡಲಿವೆ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ.
ಬ್ಯಾಂಕ್ ಅಥವಾ ಅಂಚೆ ಕಚೇರಿ ಠೇವಣಿಗಳಿಂದ ಬರುವ ಬಡ್ಡಿ ಆದಾಯವು ಆರ್ಥಿಕ ವರ್ಷವೊಂದರಲ್ಲಿ ಸಾಮಾನ್ಯ ನಾಗರಿಕರಿಗೆ ₹50,000 ಮತ್ತು ಹಿರಿಯ ನಾಗರಿಕರಿಗೆ ₹1 ಲಕ್ಷದ ಮಿತಿ ಮೀರಿದರೆ ಅದರಿಂದ ಟಿಡಿಎಸ್ ಕಡಿತಗೊಳಿಸಲಾಗುವುದು. 2025ರ ಆದಾಯ ತೆರಿಗೆ ಕಾಯ್ದೆಯ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಇಲಾಖೆ 'ಎಕ್ಸ್' ಪೋಸ್ಟ್‌ನಲ್ಲಿ ಮಾಹಿತಿ ನೀಡಿದೆ.

