HEALTH TIPS

ಭಾರತ, ರಷ್ಯಾ ಸೇರಿ ಮಿತ್ರ ರಾಷ್ಟ್ರಗಳಿಗೆ ಹೊರ್ಮುಜ್ ಜಲಸಂಧಿ ಮುಕ್ತವಾಗಿದೆ: ಇರಾನ್

 ಮುಂಬೈ: ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧ ಆರಂಭವಾಗಿ ಒಂದು ತಿಂಗಳು ಕಳೆಯುತ್ತಿದೆ. ಇರಾನ್ ಹೊರ್ಮುಜ್ ಜಲಸಂಧಿಯನ್ನು ಮುಚ್ಚಿರುವುದು ಜಾಗತಿಕ ಬಿಕ್ಕಟ್ಟಾಗಿ ಪರಿಣಮಿಸಿದೆ. ಈ ನಡುವೆ, ಹೊರ್ಮುಜ್ ಜಲಸಂಧಿಯನ್ನು ಶತ್ರುಗಳಿಗೆ ಮಾತ್ರ ಮುಚ್ಚಲಾಗಿದ್ದು, ಚೀನಾ, ರಷ್ಯಾ, ಭಾರತ, ಇರಾಕ್ ಮತ್ತು ಪಾಕಿಸ್ತಾನ ಸೇರಿದಂತೆ ಮಿತ್ರ ರಾಷ್ಟ್ರಗಳಿಗೆ ಮುಕ್ತಗೊಳಿಸಲಾಗಿದೆ ಎಂದು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಹೇಳಿದ್ದಾರೆ. 


'ಚೀನಾ, ರಷ್ಯಾ, ಭಾರತ, ಇರಾಕ್ ಮತ್ತು ಪಾಕಿಸ್ತಾನ ಸೇರಿದಂತೆ ಮಿತ್ರ ರಾಷ್ಟ್ರಗಳ ಹಡುಗುಗಳಿಗೆ ಹೊರ್ಮುಜ್ ಜಲಸಂಧಿಯ ಮೂಲಕ ಸಂಚಾರಕ್ಕೆ ಅನುಮತಿಸಿದ್ದೇವೆ'ಎಂದು ಅರಾಘ್ಚಿ ಹೇಳಿರುವುದಾಗಿ ಮುಂಬೈನಲ್ಲಿರುವ ಇರಾನ್ ಕಾನ್ಸುಲೇಟ್ ಜನರಲ್ ಹಂಚಿಕೊಂಡ ಪೋಸ್ಟ್‌ನಲ್ಲಿ ತಿಳಿಸಲಾಗಿದೆ.

ವಿಶ್ವದ ತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲದ(ಎನ್‌ಎನ್‌ಜಿ) ಸುಮಾರು ಶೇ 20ರಷ್ಟು ಸಾಗಾಟವು ಹೊರ್ಮುಜ್ ಜಲಸಂಧಿಯ ಮೂಲಕ ಆಗುತ್ತದೆ. ಇದು ಜಾಗತಿಕ ಇಂಧನ ಪೂರೈಕೆಯಲ್ಲಿ ಅತ್ಯಂತ ನಿರ್ಣಾಯಕ ಮಾರ್ಗಗಳಲ್ಲಿ ಒಂದಾಗಿದೆ.

'ನಮ್ಮ ದೃಷ್ಟಿಕೋನದಲ್ಲಿ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ. .ಶತ್ರುಗಳಿಗೆ ಮಾತ್ರ ಸಂಪೂರ್ಣ ಮುಚ್ಚಲ್ಪಟ್ಟಿದೆ' ಎಂದು ಅರಾಘ್ಚಿ ಇರಾನ್‌ನ ಟಿವಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ನಮ್ಮ ಶತ್ರುಗಳು ಮತ್ತು ಅವರ ಮಿತ್ರರಾಷ್ಟ್ರಗಳ ಹಡಗುಗಳಿಗೆ ಹಾದುಹೋಗಲು ಅವಕಾಶ ನೀಡುವುದಕ್ಕೆ ಯಾವುದೇ ಕಾರಣವಿಲ್ಲ ಎಂದಿದ್ದಾರೆ.

ಸ್ನೇಹಪರ ರಾಷ್ಟ್ರಗಳ ಹಡಗುಗಳಿಗೆ ಇರಾನ್‌ನ ಸಶಸ್ತ್ರ ಪಡೆಗಳು ಈಗಾಗಲೇ ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಟ್ಟಿವೆ ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮೊದಲು,ಅಮೆರಿಕ, ಇಸ್ರೇಲ್ ಅಥವಾ ಅವರ ಮಿತ್ರರಾಷ್ಟ್ರಗಳಿಗೆ ಸಂಬಂಧಿಸಿದ ಹಡುಗಗಳಲ್ಲಿ ಒಂದು ಲೀಟರ್ ತೈಲ ಸಾಗಾಟಕ್ಕೂ ಅನುಮತಿ ನೀಡುವುದಿಲ್ಲ ಎಂದು ಇರಾನ್ ಹೇಳಿತ್ತು.

ಜಾಗತಿಕ ಇಂಧನ ಪೂರೈಕೆ ಅಡಚಣೆಗಳ ನಡುವೆ ಹೊರ್ಮುಜ್ ಜಲಸಂಧಿಯನ್ನು ಮತ್ತೆ ಮುಕ್ತಗೊಳಿಸುವಂತೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಒತ್ತಾಯಿಸಿದ ಬೆನ್ನಲ್ಲೇ ಅರಾಘ್ಚಿ ಹೇಳಿಕೆ ಬಂದಿದೆ. 








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries