ರಿಯಾದ್: ಸೌದಿ ಅರೇಬಿಯಾದ ರಾಜಧಾನಿ ರಿಯಾದ್ ನಗರದ ಪೂರ್ವ ಭಾಗದಲ್ಲಿ ಭಾರೀ ಸ್ಫೋಟಗಳ ಶಬ್ದಗಳು ಕೇಳಿಬಂದಿರುವುದಾಗಿ ಅಂತರರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.
ಪೂರ್ವ ರಿಯಾದ್ ನ ನಿವಾಸಿಗಳ ಪ್ರಕಾರ, ಒಂದರ ಹಿಂದೆ ಒಂದಾಗಿ ಹಲವು ದೊಡ್ಡ ಸ್ಫೋಟಗಳು ಸಂಭವಿಸಿದ್ದು, ಅದರ ನಂತರ ಆಕಾಶದಲ್ಲಿ ದಟ್ಟ ಹೊಗೆ ಆವರಿಸಿರುವುದು ಗೋಚರಿಸಿದೆ.
ಎಎಫ್‌ಪಿ ವರದಿ ಪ್ರಕಾರ, ಅಲ್ಲಿನ ವರದಿಗಾರರೂ ಸ್ಫೋಟಗಳ ಶಬ್ದವನ್ನು ನೇರವಾಗಿ ಕೇಳಿದ್ದಾರೆ ಎಂದು ತಿಳಿದು ಬಂದಿದೆ ಎಂದು Aljazeera ವರದಿ ಮಾಡಿದೆ.
ಘಟನೆಯ ಸ್ವರೂಪ, ಸ್ಫೋಟಗಳ ಕಾರಣ ಹಾಗೂ ಸಂಭವನೀಯ ಹಾನಿಯ ಬಗ್ಗೆ ಅಧಿಕಾರಿಗಳಿಂದ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಭದ್ರತಾ ಸಂಸ್ಥೆಗಳು ಎಚ್ಚರಿಕೆಯಲ್ಲಿ ಇದ್ದು, ಪರಿಸ್ಥಿತಿಯನ್ನು ಸಮೀಪದಿಂದಲೇ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಈ ಬೆಳವಣಿಗೆ ಮಧ್ಯಪ್ರಾಚ್ಯದಲ್ಲಿ ಈಗಾಗಲೇ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಮತ್ತಷ್ಟು ಗಂಭೀರಗೊಳಿಸಿದೆ.

