ಮಲಪ್ಪುರಂ: 'ಹರಿಯಾಣದ ಕಾಂಗ್ರೆಸ್ ಮುಖಂಡರ ವಿರುದ್ಧ ಕೇಳಿಬಂದಿರುವ 'ಕಾಸಿಗಾಗಿ ಸೀಟು' ಆರೋಪವು ಅತ್ಯಂತ ಗಂಭೀರವಾದುದು. ಪಕ್ಷದ ವರಿಷ್ಠರು ಈ ಬಗ್ಗೆ ಉತ್ತರ ನೀಡಬೇಕು' ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಒತ್ತಾಯಿಸಿದ್ದಾರೆ.
ಟಿಕೆಟ್ ಆಕಾಂಕ್ಷಿಗಳಿಂದ ಕಾಂಗ್ರೆಸ್ ಹಿರಿಯ ಮುಖಂಡರು ಮತ್ತು ಅವರ ಆಪ್ತರು ಭಾರಿ ಮೊತ್ತಕ್ಕೆ ಬೇಡಿಕೆ ಇಟ್ಟಿದ್ದಾರೆ.
ಆರೋಪದ ಬಗ್ಗೆ ಪಕ್ಷ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ.
ಬಿಜೆಪಿ ಪ್ರಾಯೋಜಿತ: 'ತಮ್ಮ ವಿರುದ್ಧ ದಾಖಲಾಗಿರುವ 'ಕಾಸಿಗಾಗಿ ಸೀಟು' ಪ್ರಕರಣವು ಬಿಜೆಪಿ-ಸಿಪಿಎಂ ಪ್ರಾಯೋಜಿತ' ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ. 'ಚುನಾವಣಾ ಪ್ರಕ್ರಿಯೆಯ ಭಾಗವಾಗಿ ಈ ಪ್ರಕರಣವನ್ನು ಸೃಷ್ಟಿಸಲಾಗಿದೆ. ಯಾವುದೇ ಭಯವಿಲ್ಲ ಕಾನೂನು ಪ್ರಕಾರ ಮುಂದುವರಿಯುತ್ತೇನೆ' ಎಂದು ಅವರು ಹೇಳಿದ್ದಾರೆ.



