ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಯುದ್ಧದಿಂದ ಅಪಾರ ಪ್ರಮಾಣದ ಹಾನಿಯಾಗಿದ್ದು, ಆ ಪ್ರದೇಶದಲ್ಲಿ ಶಾಂತಿ ಮರುಸ್ಥಾಪನೆಯ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ನೆದರ್ಲೆಂಡ್ ಪ್ರಧಾನಿ ರಾಬ್ ಜೆಟ್ಟೆನ್ ಅವರೊಂದಿಗಿನ ಸಂಭಾಷಣೆಯಲ್ಲಿ ಹೇಳಿದ್ದಾರೆ.
ಪೋನ್ ಕರೆಯಲ್ಲಿ ಉಭಯ ದೇಶಗಳ ನಾಯಕರು ಭಾರತ ಮತ್ತು ನೆದರ್ಲೆಂಡ್ ನಡುವಿನ ದ್ವಿಪಕ್ಷೀಯ ಸಂಬಂಧ ಹಾಗೂ ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಮಾತನಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ , 'ಡಚ್ ಪ್ರಧಾನಿಯೊಂದಿಗೆ ಪೋನ್ ಕರೆಯಲ್ಲಿ ಮಾತನಾಡಿದ್ದು, ಸೆಮಿಕಂಡಕ್ಟರ್, ಬೃಹತ್ ನೀರಾವರಿ ಯೋಜನೆ, ಗ್ರೀನ್ ಹೈಡ್ರೋಜನ್, ವ್ಯಾಪಾರ ಹಾಗೂ ರಕ್ಷಣಾ ವಲಯದ ಕುರಿತು ಚರ್ಚೆ ನಡೆಸಲಾಗಿದೆ' ಎಂದು ತಿಳಿಸಿದ್ದಾರೆ.

