HEALTH TIPS

ವಿದೇಶಿ ಪ್ರಜೆಗಳ ವೀಸಾ ವಿಸ್ತರಣೆಗೆ ಕ್ರಮ: ಎಂಇಎ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಬೆಳವಣಿಗೆಗಳಿಂದ ಪ್ರಯಾಣದ ಯೋಜನೆಗಳಲ್ಲಿ ವ್ಯತ್ಯಾಸವಾಗಿರುವ ವಿದೇಶಿ ಪ್ರಜೆಗಳಿಗೆ ವೀಸಾ ವಿಸ್ತರಣೆ ಅಥವಾ ದೇಶದಲ್ಲಿ ತಮ್ಮ ವಾಸ್ತವ್ಯವನ್ನು ಕ್ರಮಬದ್ಧಗೊಳಿಸಲು ಹತ್ತಿರದ ವಿದೇಶಿಗರ ಪ್ರಾದೇಶಿಕ ನೋಂದಣಿ ಕಚೇರಿಯನ್ನು (ಎಫ್‌ಆರ್‌ಆರ್‌ಒ) ಸಂಪರ್ಕಿಸುವಂತೆ ಭಾರತದ ವಿದೇಶಾಂಗ ಸಚಿವಾಲಯ (ಎಂಇಎ) ತಿಳಿಸಿದೆ.

ಇರಾನ್‌ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಬೆನ್ನಲ್ಲೇ, ಕೊಲ್ಲಿ ರಾಷ್ಟ್ರಗಳಲ್ಲಿನ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿ ಇರಾನ್‌ ಭಾರಿ ದಾಳಿ ನಡೆಸಿದೆ. ಇದರಿಂದಾಗಿ ಕೊಲ್ಲಿ ರಾಷ್ಟ್ರಗಳಲ್ಲಿ ವಿಮಾನ ಹಾರಾಟ ನಿಷೇಧ ವಲಯ ಘೋಷಿಸಲಾಗಿದೆ. ಇದರ ಪರಿಣಾಮ ಹಲವು ವಿಮಾನಗಳ ಹಾರಾಟ ರದ್ದಾಗಿದೆ. ಇದರಿಂದ ಪ್ರಯಾಣದ ತೊಂದರೆ ಎದುರಿಸುತ್ತಿರುವ ವಿದೇಶಿ ಪ್ರಜೆಗಳಿಗೆ ವೀಸಾ ವಿಸ್ತರಿಸಲು ಎಂಇಎ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

'ಇರಾನ್‌ ಮೇಲೆ ಅಮೆರಿಕ-ಇಸ್ರೇಲ್‌ ದಾಳಿಯ ಬಳಿಕ ಅಂತರರಾಷ್ಟ್ರೀಯ ವಿಮಾನ ಪ್ರಮಾಣದ ಮೇಲೆ ತೀವ್ರ ಪರಿಣಾಮ ಬೀರಿದೆ. ಇದರಿಂದಾಗಿ ತಮ್ಮ ಪ್ರಯಾಣದ ಯೋಜನೆಗಳನ್ನು ಬದಲಿಸಬೇಕಾದ ವಿದೇಶಿ ಪ್ರಜೆಗಳು ತಮ್ಮ ವೀಸಾ ವಿಸ್ತರಣೆ ಅಥವಾ ವಾಸ್ತವ್ಯವನ್ನು ಕ್ರಮಬದ್ಧಗೊಳಿಸಲು ಎಫ್‌ಆರ್‌ಆರ್‌ಒಗಳನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ' ಎಂದು ಎಂಇಎ ಭಾನುವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಕುರಿತು ವಿದೇಶಿ ಪ್ರಜೆಗಳ ಕೋರಿಕೆಗೆ ಅಗತ್ಯ ನೆರವು ನೀಡುವಂತೆ ಸಂಬಂಧಪಟ್ಟ ಎಫ್‌ಆರ್‌ಆರ್‌ಒ ಅಧಿಕಾರಿಗಳಿಗೆ ಎಂಇಎ ಸೂಚಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries