ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆಕ್ಷೇಪಾರ್ಹ ಕೃತಕ ಬುದ್ದಿಮತ್ತೆ (ಎ.ಐ) ಚಿತ್ರವನ್ನು ಪೋಸ್ಟ್ ಮಾಡಿದ ಆರೋಪದಡಿ ಬಿಹಾರದ ಅರ್ವಾಲ್ ಜಿಲ್ಲೆಯ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಸಿದ್ಧನಾಥ ಕುಮಾರ್ ಬಂಧಿತ. ದೆಹಲಿ ಮತ್ತು ಸ್ಥಳೀಯ ಪೋಲಿಸರ ಜಂಟಿ ತಂಡವು ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ದೆಹಲಿಗೆ ಕರೆದೊಯ್ಯಲಾಗಿದೆ. ಎ.ಐ ಬಳಸಿ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರಗಳನ್ನು ರಚಿಸಿ, ಅವುಗಳನ್ನು ಸಾಮಾಜಿಕ ಜಾಲತಾಣಗಳ ಅನೇಕ ಖಾತೆಗಳಲ್ಲಿ ಹಂಚಿಕೊಳ್ಳಲಾಗಿದೆ. ಜನರನ್ನು ದಾರಿ ತಪ್ಪಿಸಲು ಮತ್ತು ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡುವ ಉದ್ದೇಶದಿಂದ ಆರೋಪಿ ಈ ಕೃತ್ಯವೆಸಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.
ಬಿಜೆಪಿ ಶಾಸಕಿ ಮತ್ತು ವಿದೇಶದಲ್ಲಿರುವ ನಾಯಕಿಯ ತಿರುಚಿದ ಚಿತ್ರಗಳನ್ನು ಸಹ ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿ ಹಂಚಿಕೊಂಡಿದ್ದ ಎಂದು ತಿಳಿಸಿದರು.

