ಮಂಜೇಶ್ವರ: ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜೇಶ್ವರ ಚಕ್ಕಿಗುಡ್ಡೆ ನಿವಾಸಿ ಚಂದ್ರಹಾಸ ಎಂಬವರ ಪತ್ನಿ ಗೀತಾ(53)ಅವರು ಮನೆ ಸನಿಹದ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಬಾವಿಗೆ ಬಿದ್ದಿರುವ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿಯನ್ವಯ ಉಪ್ಪಳದಿಂದ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಗೀತಾ ಅವರನ್ನು ಬಾವಿಯಿಮದ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಿರಲಿಲ್ಲ. ಪತಿ ಮತ್ತು ಮಕ್ಕಳು ಕೆಲಸಕ್ಕೆ ತೆರಳಿದ್ದು, ಗೀತಾ ಮನೆಯಲ್ಲಿ ಏಕಾಂಗಿಯಾಗಿದ್ದರು. ಮಂಜೇಶ್ವರ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

