ಸಮರಸ ಚಿತ್ರಸುದ್ದಿ: ಉಪ್ಪಳ: ಮುಳಿಂಜ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಮೂಡಂಬೈಲಿನ ವಾಗ್ದೇವೀ ಯಕ್ಷಗಾನ ಕಲಾಸಂಘದವರಿಂದ ಶಲ್ಯ ಸಾರಥ್ಯ ಕಥಾಭಾಗದ ತಾಳಮದ್ದಳೆ ಜರಗಿತು. ಪಾತ್ರವರ್ಗದಲ್ಲಿ ನಾಗರಾಜ ಪದಕಣ್ಣಾಯ ಮೂಡಂಬೈಲು, ನಾರಾಯಣ ನಾವಡ ಮೂಡಂಬೈಲು, ಚಂದ್ರಕುಮಾರ್ ಬಲಿಪಗುಳಿ ಹಾಗೂ ಶಾರ್ವರಿ ನಾವಡ ಮೂಡಂಬೈಲು ಭಾಗವಹಿಸಿದರು. ಹಿಮ್ಮೇಳದಲ್ಲಿ ಭಾಗವತರಾಗಿ ಶುಭಾನಂದ ಶೆಟ್ಟಿ ಕುಳೂರು, ಚೆಂಡೆ ಮತ್ತು ಮೃದಂಗದಲ್ಲಿ ವಾಸುದೇವ ಮಯ್ಯ ವರ್ಕಾಡಿ ಹಾಗೂ ಸ್ಕಂದರಾಜ್ ಮಯ್ಯ ವರ್ಕಾಡಿ ಸಹಕರಿಸಿದರು.

.jpg)
