ಈ ಋತುವಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಾವಳಿಯನ್ನು ಅವರು ಕಳೆದುಕೊಳ್ಳುವುದು ಬಹುತೇಕ ಖಚಿತವಾಗಿದೆ.
ಅವರು ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಹಾಜರಾದರು. ಆದರೆ, ತಮ್ಮ 'ಶ್ರೇಷ್ಠ ಅಂತರ್ರಾಷ್ಟ್ರೀಯ ಚೊಚ್ಚಲ ಪುರುಷ ಆಟಗಾರ' ಪ್ರಶಸ್ತಿಯನ್ನು ಸ್ವೀಕರಿಸಲು ವೇದಿಕೆಗೆ ನಡೆದು ಹೋಗಲು ಅವರಿಗೆ ಸಾಧ್ಯವಾಗಲಿಲ್ಲ. ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ಸ್ವತಃ ವೇದಿಕೆಯಿಂದ ಇಳಿದು ಬಂದು ಪ್ರಶಸ್ತಿಯನ್ನು ರಾಣಾಗೆ ನೀಡಿದರು.
ಊರುಗೋಲಿನ ಆಸರೆಯಿಂದ ರಾಣಾ ನಡೆಯುತ್ತಿರುವ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ಇದು ಅವರ ಗಾಯದ ತೀವ್ರತೆಯ ಬಗ್ಗೆ ಊಹಾಪೋಹಗಳನ್ನು ಹುಟ್ಟುಹಾಕಿದೆ.
ಕಳೆದ ತಿಂಗಳು ಭಾರತದಲ್ಲಿ ನಡೆದ ಐಸಿಸಿ ಪುರುಷರ ಟಿ20 ವಿಶ್ವಕಪ್ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ರಾಣಾರ ಮಂಡಿಗೆ ಗಾಯವಾಗಿತ್ತು. ಗಾಯ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಅವರು ವಿಶ್ವಕಪ್ನಿಂದ ಹೊರಬಿದ್ದರು. ಅವರ ಸ್ಥಾನಕ್ಕೆ ಮುಹಮ್ಮದ್ ಸಿರಾಜ್ ಅವರನ್ನು ಭಾರತೀಯ ತಂಡಕ್ಕೆ ಸೇರಿಸಲಾಗಿತ್ತು.
24 ವರ್ಷದ ರಾಣಾ ಫೆಬ್ರವರಿ 9ರಂದು ಮುಂಬೈಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾದರು. ಆದರೆ, ಈ ಬಾರಿ ಐಪಿಎಲ್ನಲ್ಲಿ ಆಡುವ ಸಾಧ್ಯತೆ ದೂರವಾಗಿದೆ.

