HEALTH TIPS

ಅಸ್ಸಾಂನಲ್ಲಿ ಕಾಂಗ್ರೆಸ್ ಗೆ ಭಾರಿ ಹೊಡೆತ: ಹಿರಿಯ ನಾಯಕ ಪ್ರದ್ಯುತ್ ಬೊರ್ಡೊಲೊಯಿ ಬಿಜೆಪಿಗೆ ಸೇರ್ಪಡೆ!

ನವದೆಹಲಿ: ಅಸ್ಸಾಂ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಂತೆಯೇ ಕಾಂಗ್ರೆಸ್ ಗೆ ದೊಡ್ಡ ಹೊಡೆತ ಬಿದ್ದಿದೆ. ಹಾಲಿ ಸಂಸದ ಪ್ರದ್ಯುತ್ ಬೊರ್ಡೊಲೊಯಿ ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. 

ನಿನ್ನೆಯಷ್ಟೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಬೊರ್ಡೊಲೊಯಿ ಇಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಸೈಕಿಯಾ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.

ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಶರ್ಮಾ, ಹಾಲಿ ಕಾಂಗ್ರೆಸ್ ಸಂಸದ ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬೊರ್ಡೊಲೊಯಿ ಸೇರ್ಪಡೆಯಿಂದ ಬಿಜೆಪಿ ಖಂಡಿತವಾಗಿ ಬಲವರ್ಧನೆಯಾಗಲಿದೆ. ಅವರ ಸೇರ್ಪಡೆಗೆ ಇಂದು ಬೆಳಗ್ಗೆ ಪಕ್ಷದ ರಾಷ್ಟ್ರೀಯ ಮಟ್ಟದ ನಾಯಕರು ಅನುಮೋದನೆ ನೀಡಿದ್ದರು. ಹಾಲಿ ಸಂಸದರ ಅವಧಿ ಇನ್ನೂ ಮೂರು ವರ್ಷ ಇದೆ ಎಂದು ತಿಳಿಸಿದರು.

ಒಂದೇ ತಿಂಗಳಲ್ಲಿ ಇಬ್ಬರ ನಿರ್ಗಮನ: ಅಸ್ಸಾಂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಭೂಪೇನ್ ಕುಮಾರ್ ಬೋರಾ ಬಿಜೆಪಿ ಸೇರ್ಪಡೆಯಾದ ಒಂದು ತಿಂಗಳ ಅವಧಿಯಲ್ಲಿ ಇದೀಗ ಮತ್ತೊರ್ವ ನಾಯಕ ಬಿಜೆಪಿ ಸೇರಿದ್ದು, ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹೊಡೆತ ನೀಡಿದೆ.

ಈ ಮಧ್ಯೆ ಪ್ರದ್ಯುತ್ ಬೊರ್ಡೊಲೊಯಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿರುವ ಅಸ್ಸಾಂ ಉಸ್ತುವಾರಿ ಹೊತ್ತಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಟಿಕೆಟ್ ಹಂಚಿಕೆಯಲ್ಲಿ ಅಸಮಧಾನದಿಂದ ಬೊರ್ಡೊಲೊಯಿ ರಾಜೀನಾಮೆ ನೀಡಿದ್ದಾರೆ ಎಂದರು.

ರಾಜೀನಾಮೆ ನೀಡುವ ಮುನ್ನ ಅವರೊಂದಿಗೆ ಮಾತನಾಡಲು ಬಯಸಿದ್ದೇವು. ಆದರೆ, ತಮ್ಮನ್ನು ಪಕ್ಷದಲ್ಲಿ ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ರಾಜೀನಾಮೆ ನೀಡಿದ್ದಾರೆ. ಇದೊಂದು ದುರಾದೃಷ್ಟಕರವಾಗಿದೆ ಎಂದು ತಿಳಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries