ಪೆರ್ಲ: ಎಣ್ಮಕಜೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತ್ಯಾಜ್ಯ ತಪಾಸಣೆಗೆ ಸಂಬಂಧಿಸಿದಂತೆ ಕ್ವಾರ್ಟರ್ಸ್ ಮತ್ತು ಅಪಾರ್ಟ್‍ಮೆಂಟ್‍ಗಳಲ್ಲಿ ತಪಾಸಣೆಗಳನ್ನು ಬಿಗಿಗೊಳಿಸಲಾಗಿದೆ.
ಎಣ್ಮಕಜೆ ಗ್ರಾಮ ಪಂಚಾಯತಿ ಎಂಪೋರ್ಸ್ ನೇತೃತ್ವದಲ್ಲಿ ಕಾರ್ಯಚರಣೆ ತೀವ್ರಗೊಳಿಸಲಾಗಿದೆ. ಈಗಾಗಲೇ ಪಂಚಾಯತಿಯ ಹಲವು ಕಡೆಗಳ ಕ್ವಾರ್ಟಸ್ ಗಳಲ್ಲಿ ತ್ಯಾಜ್ಯವನ್ನು ಬೇರ್ಪಡಿಸದಿರುವುದು, ಬಳಕೆದಾರ ಶುಲ್ಕವನ್ನು ಪಾವತಿಸದಿರುವುದು, ಸಾರ್ವಜನಿಕ ತೆರೆದ ಸ್ಥಳಗಳಲ್ಲಿ ಪ್ಲಾಸ್ಟಿಕ್ ಸೇರಿದಂತೆ ತ್ಯಾಜ್ಯವನ್ನು ಸುರಿಯುವುದು ಮತ್ತು ರಾಶಿ ಹಾಕುವುದು ಹಾಗೂ ಸಾರ್ವಜನಿಕ ಸ್ಥಳಗಳಿಗೆ ಕೊಳಕು ನೀರನ್ನು ಬಿಡುವುದರ ವಿರುದ್ಧ ತಪಾಸಣೆಗಳನ್ನು ಬಿಗಿಗೊಳಿಸಲಾಗಿದೆ. ಕಾನೂನು ಉಲ್ಲಂಘಿಸುವವರು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಂಬಂಧಪಟ್ಟವರು ತಿಳಿಸಿದ್ದಾರೆ.

