HEALTH TIPS

ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ ಭಾನು ಚಿಬ್‌ಗೆ ಜಾಮೀನು

ನವದೆಹಲಿ: ಇಲ್ಲಿ ನಡೆದ ಭಾರತ ಎಐ ಇಂಪ್ಯಾಕ್ಟ್ ಶೃಂಗ ಸಭೆಯಲ್ಲಿ ಅಂಗಿ ಕಳಚಿ ಪ್ರತಿಭಟನೆ ನಡೆಸಿದ ಆರೋಪಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಅಧ್ಯಕ್ಷ ಉದಯ್ ಭಾನು ಚಿಬ್ ಅವರಿಗೆ ದಿಲ್ಲಿ ನ್ಯಾಯಾಲಯ ಶನಿವಾರ ಜಾಮೀನು ನೀಡಿದೆ.

ನೋಟಿಸು ನೀಡಿದ ಬಳಿಕ ಚಿಬ್ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ ಹಾಗೂ ತನಿಖೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಪಟಿಯಾಲ ಹೌಸ್ ನ್ಯಾಯಾಲಯದ ಪ್ರಥಮ ದರ್ಜೆ ನ್ಯಾಯಾಂಗ ದಂಡಾಧಿಕಾರಿ ವಂಶಿಕಾ ಮೆಹ್ತಾ ಅವರು ಗಮನ ಸೆಳೆದರು.

ಚಿಬ್‌ನ ಮೊಬೈಲ್ ಈಗಾಗಲೇ ಪೊಲೀಸ್ ವಶದಲ್ಲಿ ಇದೆ. ಆದರೂ ಅವರನ್ನು ಮತ್ತಷ್ಟು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಬೇಕು ಎಂಬುದಕ್ಕೆ ಯಾವುದೇ ಸ್ಪಷ್ಟ ಕಾರಣಗಳನ್ನು ನೀಡಲು ತನಿಖಾಧಿಕಾರಿಗಳು ವಿಫಲರಾಗಿದ್ದಾರೆ ಎಂದು ನ್ಯಾಯಾಧೀಶರು ಹೇಳಿದರು.

ಐವೈಸಿಯ ರಾಷ್ಟ್ರಾಧ್ಯಕ್ಷರನ್ನು ಪೊಲೀಸ್ ಕಸ್ಟಡಿಗೆ ಕೋರಲು ಯಾವುದೇ ಬಲವಾದ ಕಾರಣಗಳನ್ನು ನೀಡಲು ದಿಲ್ಲಿ ಕ್ರೈಮ್ ಬ್ರಾಂಚ್‌ಗೆ ಸಾಧ್ಯವಾಗಲಿಲ್ಲ. ಆದುದರಿಂದ ದಂಡಾಧಿಕಾರಿ ಅವರು ಚಿಬ್ ಅವರಿಗೆ ಜಾಮೀನು ನೀಡಿದ್ದಾರೆ ಎಂದು ವಕೀಲ ಸುಲೈಮಾನ್ ಮುಹಮ್ಮದ್ ಖಾನ್ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries