ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಸಂಬಂಧಿಸಿದಂತೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪ್ರಧಾನಿ ಮೋದಿ ಪೋಸ್ಟ್ ಮಾಡಿದ್ದಾರೆ.
'ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೂರವಾಣಿ ಕರೆ ಮಾಡಿದ್ದು, ನಾವು ಪಶ್ಚಿಮ ಏಷ್ಯಾದಲ್ಲಿ ಈಗಿನ ಪರಿಸ್ಥಿತಿ ಕುರಿತು ವಿಚಾರ ವಿನಿಮಯ ಮಾಡಿಕೊಂಡೆವು' ಎಂದು ತಿಳಿಸಿದ್ದಾರೆ.
'ಪ್ರಸ್ತುತ ಉದ್ವಿಗ್ನ ಶಮನ ಮತ್ತು ಶಾಂತಿ ಪುನಃಸ್ಥಾಪಿಸಲು ಭಾರತ ಬೆಂಬಲಿಸುತ್ತದೆ' ಎಂದು ಹೇಳಿದ್ದಾರೆ.
'ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ, ಸುರಕ್ಷಿತ ಸಂಚಾರ ಖಚಿತಪಡಿಸಿಕೊಳ್ಳುವುದು ಇಡೀ ಜಗತ್ತಿಗೆ ಅತ್ಯಗತ್ಯವಾಗಿದೆ' ಎಂದು ಪ್ರತಿಪಾದಿಸಿದ್ದಾರೆ.
ಶಾಂತಿ ಹಾಗೂ ಸ್ಥಿರತೆಯ ಪ್ರಯತ್ನಗಳ ಕುರಿತು ಪರಸ್ಪರ ಸಮನ್ವಯ ಸಾಧಿಸುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ.

