ಕಾಸರಗೋಡು: ಚಂದ್ರಗ್ರಹಣ ಹಿನ್ನೆಲೆಯಲ್ಲಿ ಜಿಲ್ಲೆಯ ಕೆಲವೊಂದು ದೇವಾಲಯಗಳಲ್ಲಿ ಪೂಜಾ ಸಮಯದಲ್ಲಿ ಬದಲಾವಣೆ ಮಾಡಿಕೊಳ್ಳಲಾಗಿದೆ. ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಮಧ್ಯಾಹ್ನ 12ಗಂಟೆಗೆ ಮುಂಚಿತವಾಗಿ ಮಧ್ಯಾಹ್ನ ಪೂಜೆ ನಡೆಯಲಿದ್ದು, ಭೋಜನ ಪ್ರಸಾದ ಎಂದಿನಂತೆ ನಡೆಯಲಿದೆ. ನಂತರ ಸಂಜೆ 7ಕ್ಕೆ ಗರ್ಭಗುಡಿ ಬಾಗಿಲು ತೆರೆದು ರಾತ್ರಿ ಪೂಜೆ ನಡೆಸಲಾಗುವುದು ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
ಪೆರ್ಲ ಸನಿಹದ ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಮಧ್ಯಾಹ್ನ ಪೂಜೆ 11.45ಕ್ಕೆ ನೆರವೇರಲಿದ್ದು, ಬಲಿವಾಡು ಸೇರಿದಂತೆ ಇತರ ಸೇವೆ ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

