ಬದಿಯಡ್ಕ: ಬದಿಯಡ್ಕ ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷ, ಕೊಡುಗೈ ದಾನಿ ಕಿಳಿಂಗಾರು ಸಾಯಿರಾಂ ಕೃಷ್ಣ ಭಟ್ ಅವರನ್ನು ಕಾಸರಗೋಡು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಎಲ್. ಅಶ್ವಿನಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಬಿಜೆಪಿ ಬದಿಯಡ್ಕ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಮುಂಡೋಳುಮೂಲೆ, ಬದಿಯಡ್ಕ ಗ್ರಾಮಪಂಚಾಯಿತಿ ಅಧ್ಯಕ್ಷ ಶಂಕರ ಡಿ., ಪ್ರಮುಖರಾದ ಮಹೇಶ್ ವಳಕ್ಕುಂಜ, ಅಶ್ವಿನಿ ಕೆ.ಎಂ., ಸುಕುಮಾರ ಕುದ್ರೆಪ್ಪಾಡಿ, ನವಿನಾಕ್ಷನ್, ಶ್ಯಾಮಪ್ರಸಾದ ಸರಳಿ, ಹರೀಶ ಎ., ಪ್ರಶಾಂತ್ ಕುಮಾರ್ ಶೆಟ್ಟಿ ಬೇಳ, ಕಾರ್ಯಕರ್ತರು ಜೊತೆಗಿದ್ದರು.

.jpg)
