HEALTH TIPS

ಪಶ್ಚಿಮ ಏಷ್ಯಾ ಪರಿಸ್ಥಿತಿ ಕುರಿತು ಇರಾನ್ ಅಧ್ಯಕ್ಷರೊಂದಿಗೆ ಪಿಎಂ ಮೋದಿ ಮಾತುಕತೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ತಲೆದೋರಿರುವ ಗಂಭೀರ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಇರಾನ್ ಅಧ್ಯಕ್ಷ ಡಾ. ಮಸೂದ್ ಪೆಜೆಶ್ಕಿಯಾನ್ ಅವರಿಗೆ ಗುರುವಾರ ರಾತ್ರಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ.

ಈ ಪ್ರದೇಶದಲ್ಲಿ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿರುವ ಬಿಕ್ಕಟ್ಟು, ಜೀವ ಕಳೆದುಕೊಳ್ಳುತ್ತಿರುವ ಮುಗ್ದ ನಾಗರಿಕರು ಮತ್ತು ಮೂಲಸೌಕರ್ಯ ನಾಶ ಕುರಿತು ಪ್ರಧಾನಿ ಮೋದಿ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಜತೆಗೆ ಭಾರತೀಯ ನಾಗರಿಕರ ಸುರಕ್ಷೆ, ಅಡೆತಡೆ ಇಲ್ಲದೆ ಸರಕು ಹಾಗೂ ಇಂಧನ ಸಾಗಣೆಯು ಭಾರತದ ಪ್ರಮುಖ ಆದ್ಯತೆಯಾಗಿದೆ ಎಂದು ವರದಿಯಾಗಿದೆ.

'ಇರಾನ್ ಅಧ್ಯಕ್ಷ ಡಾ. ಮಸೂದ್ ಪೆಜಶ್ಕಿಯಾನ್ ಜತೆ ಗುರುವಾರ ರಾತ್ರಿ ಮಾತುಕತೆ ನಡೆಸಿದೆ. ಪಶ್ಚಿಮ ಏಷ್ಯಾದಲ್ಲಿ ತಲೆದೋರಿರುವ ಗಂಭೀರ ಪರಿಸ್ಥಿತಿ ಕುರಿತು ಮಾತುಕತೆ ನಡೆಯಿತು. ಪರಿಸ್ಥಿತಿ ಹದಗೆಡುತ್ತಿರುವುದರ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದೆ ಮತ್ತು ನಾಗರಿಕರು ಮತ್ತು ಮೂಲಸೌಕರ್ಯ ಆಗಿರುವ ನಷ್ಟದ ಕುರಿತು ಕವಳ ವ್ಯಕ್ತಪಡಿಸಿದೆ' ಎಂದು ಪ್ರಧಾನಿ ಮೋದಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

'ಶಾಂತಿ ಮತ್ತು ಸ್ಥಿರತೆ ಕಾಪಾಡುವಲ್ಲಿ ಭಾರತದ ಬದ್ಧತೆ ಮತ್ತು ಮಾತುಕತೆ ಹಾಗೂ ರಾಜತಾಂತ್ರಿಕ ಮಾರ್ಗದ ಮೂಲಕ ಬಿಕ್ಕಟ್ಟು ಶಮನಗೊಳಿಸುವಂತೆ ಒತ್ತಿ ಹೇಳಲಾಯಿತು' ಎಂದಿದ್ದಾರೆ.

ಇರಾನ್‌ನ ಸದ್ಯದ ಪರಿಸ್ಥಿತಿ ಮತ್ತು ಪ್ರಾಂತ್ಯದಲ್ಲಿನ ಸದ್ಯದ ಬೆಳವಣಿಗೆ ಕುರಿತು ಇರಾನ್ ಅಧ್ಯಕ್ಷ ಡಾ. ಮಸೂದ್ ಅವರು ಪ್ರಧಾನಿ ಮೋದಿಗೆ ಮಾಹಿತಿ ನೀಡಿದರು. ನಿರಂತರವಾಗಿ ಜತೆಗೂಡಿರಲು ಉಭಯ ನಾಯಕರು ಸಮ್ಮತಿಸಿದರು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಹಡಗು ಮೂಲಕ ಭಾರತಕ್ಕೆ ಅಗತ್ಯವಿರುವ ಇಂಧನ ಪೂರೈಕೆಯಾಗುವ ಹೊರ್ಮುಜ್ ಜಲಸಂಧಿಯನ್ನು ಇರಾನ್‌ ಮುಚ್ಚಿದೆ. ಎರಡು ದಿನಗಳ ಹಿಂದೆ ಭಾರತದತ್ತ ಹೊರಟಿದ್ದ ಬೃಹತ್ ಹಡಗೊಂದು ಹೊರ್ಮುಜ್ ಜಲಸಂಧಿಯಲ್ಲಿ ಸಾಗುವಾಗ ಅದರ ಮೇಲೆ ಇರಾನ್ ಪಡೆಗಳು ದಾಳಿ ನಡೆಸಿದ್ದವು. ಈ ನಿಟ್ಟಿನಲ್ಲಿ ಈ ಮಾತುಕತೆ ಪ್ರಾಮುಖ್ಯತೆ ಪಡೆದುಕೊಂಡಿದೆ.

ಇರಾನ್ ವಿರುದ್ಧ ಇಸ್ರೇಲ್ ಹಾಗೂ ಅಮೆರಿಕವು ಜಂಟಿ ದಾಳಿ ಆರಂಭಿಸಿ ಅಲ್ಲಿನ ಸರ್ವೋಚ್ಛ ನಾಯಕ ಅಲಿ ಖಮೇನಿ ಅವರನ್ನು ಹತ್ಯೆಗೈದಿದೆ. ಇದಕ್ಕೆ ಪ್ರತೀಕಾರವಾಗಿ ಇರಾನ್‌ ಸೇನಾ ದಾಳಿಯನ್ನು ಮುಂದುವರಿಸಿದೆ. ಇಸ್ರೇಲ್‌ ಮತ್ತು ಅಮೆರಿಕ ಸೇನಾ ನೆಲೆಗಳ ಮೇಲೆ ಡ್ರೋಣ್ ಮತ್ತು ಕ್ಷಿಪಣಿ ದಾಳಿಯನ್ನು ಇರಾನ್ ಮುಂದುವರಿಸಿದೆ. ಇದರಿಂದಾಗಿ ದುಬೈ ಮತ್ತು ದೋಹಾಗಳಿಗೆ ನಾಗರಿಕ ವಿಮಾನಯಾನ ನಿಂತಿದ್ದು ಜಾಗತಿಕ ವ್ಯವಹಾರ ಸ್ಥಗಿತಗೊಂಡಿದೆ. ಈ ನಿಟ್ಟಿನಲ್ಲಿ ಕಳೆದ ಹತ್ತು ದಿನಗಳಲ್ಲಿ ಪಶ್ಚಿಮ ಏಷ್ಯಾದ ವಿವಿಧ ರಾಷ್ಟ್ರಗಳ ಮುಖಂಡರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತುಕತೆ ನಡೆಸಿದ್ದಾರೆ.

ಕೊಲ್ಲಿ ಮತ್ತು ಪಶ್ಚಿಮ ಏಷ್ಯಾದಲ್ಲಿ ಸುಮಾರು ಒಂದು ಕೋಟಿ ಭಾರತೀಯರು ನೆಲೆಸಿದ್ದಾರೆ. ಇರಾನ್‌ನಲ್ಲಿ ವಿದ್ಯಾಭ್ಯಾಸ ಮತ್ತು ನೌಕರಿಗಾಗಿ ಸುಮಾರು 10 ಸಾವಿರ ಜನ ನೆಲೆಸಿದ್ದಾರೆ. ಇಸ್ರೇಲ್‌ನಲ್ಲಿ 40 ಸಾವಿರ ಜನ ಕೆಲಸ ಮಾಡುತ್ತಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries