ಕಾಸರಗೋಡು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ 1989 ರ (ದೌರ್ಜನ್ಯ ತಡೆ) ಕಾಯ್ದೆಗೆ ಸಂಬಂಧಿಸಿದ ಜಾಗೃತಿ ವಿಚಾರ ಸಂಕಿರಣ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆಯಿತು. ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಪಿ. ಅಖಿಲ್ ಸಮಾರಂಭ ಉದ್ಘಾಟಿಸಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದವರ ಸಂರಕ್ಷಣೆಗಾಗಿ ಕಾನೂನು ಜಾರಿಗೆ ಬಂದು ಕಾಲು ಶತಮಾನ ಕಳೆದರೂ, ಇದನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೆ ತರಲು ಸಾಧ್ಯವಾಗದಿರುವುದು ವಿಷಾದನೀಯ. ಕ್ಷೇತ್ರ ಮಟ್ಟದಲ್ಲಿ ಕೆಲಸ ಮಾಡುವವರು, ಅಧಿಕಾರಿಗಳು ಮತ್ತು ಸಾರ್ವಜನಿಕ ಪ್ರತಿನಿಧಿಗಳಿಗೆ ಕಾನೂನಿನ ಬಗ್ಗೆ ಸೂಕ್ತ ಅರಿವು ಮೂಡಿಸಬೇಕಾದ ಅನಿವಾರ್ಯತೆಯಿದೆ ಎಂದು ತಿಳಿಸಿದರು.
ಜಿಲ್ಲಾ ಪರಿಶಿಷ್ಟ ಜಾತಿ ಅಭಿವೃದ್ಧಿ ಅಧಿಕಾರಿ ಪಿ. ಮಿನಿ ಅಧ್ಯಕ್ಷತೆ ವಹಿಸಿದ್ದರು. ಚೆಂಗಳ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಅಜಕೋಡೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದರು. ಜಿಲ್ಲಾ ಎಸ್‍ಎಂಎಸ್ ಪೆÇಲೀಸ್ ಸಬ್ ಇನ್ಸ್‍ಪೆಕ್ಟರ್ ಎ.ಯು. ದಿವಾಕರನ್ ಮತ್ತು ಕಾನೂನು ತಜ್ಞ ಟಿ.ವಿ. ಮದನನ್ ಜಂಟಿಯಾಗಿ ಜಾಗೃತಿ ಕಾರ್ಯಕ್ರಮ ಆಯೋಜಿಸಿದ್ದರು. ಕಾಞಂಗಾಡು ನಗರಸಭಾ ಸದಸ್ಯ ವಿ.ಶ್ರೀರಾಮನ್, ಕಾಸರಗೋಡು ನಗರಸಭಾ ಸದಸ್ಯೆ ಕೆ.ಬಿಂದು, ಮೊಗ್ರಾಲ್ ಪುತ್ತೂರು ಗ್ರಾಮ ಪಂಚಾಯತ್ ಸದಸ್ಯ ಧರ್ಮಪಾಲ, ಎಂಡೋಸಲ್ಫಾನ್ ಸೆಲ್ ಜಿಲ್ಲಾಧಿಕಾರಿ ಲಿಪು ಎಸ್.ಲಾರೆನ್ಸ್, ಕಾಸರಗೋಡು ಪರಿಶಿಷ್ಟ ಪಂಗಡ ಅಭಿವೃದ್ಧಿ ವರ್ಗದವರು ತರಗತಿ ನಡೆಸಿದರು. ಅಧಿಕಾರಿ ಪಿ.ರಾಘವನ್ ಮತ್ತು ಪರಪ್ಪ ಪರಿಶಿಷ್ಟ ಪಂಗಡ ಅಭಿವೃದ್ಧಿ ಅಧಿಕಾರಿ ಅಯ್ಯಪ್ಪನ್ ಉಪಸ್ಥಿತರಿದ್ದರು. ಕಾಞಂಗಾಡ್ ಬ್ಲಾಕ್ ಪರಿಶಿಷ್ಟ ಜಾತಿ ಅಭಿವೃದ್ಧಿ ಅಧಿಕಾರಿ ಪಿ.ಬಿ.ಬಶೀರ್ ಸ್ವಾಗತಿಸಿದರು ಜಿಲ್ಲಾ ಪರಿಶಿಷ್ಟ ಜಾತಿ ಅಭಿವೃದ್ಧಿ ಕಚೇರಿಯ ಮುಖ್ಯ ಗುಮಾಸ್ತೆ ಶೈಜಲತಾ ವಂದಿಸಿದರು.



