HEALTH TIPS

ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟನ್ನು ನೋಡಿಕೊಳ್ಳಿ: ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌

ಚೆನ್ನೈ: ರಷ್ಯಾದಿಂದ ತೈಲ ಖರೀದಿಸಲು ಅಮೆರಿಕವು ಭಾರತದ ಮೇಲೆ ಹೇರಿದ್ದ ನಿರ್ಬಂಧ ತೆಗೆದುಹಾಕಿದ್ದು, ಖರೀದಿಗೆ 30 ದಿನಗಳ ತಾತ್ಕಾಲಿಕ ವಿನಾಯಿತಿ ನೀಡಿರುವುದರ ಕುರಿತು ನಟ, ರಾಜಕಾರಣಿ ಕಮಲ್‌ ಹಾಸನ್‌ ಪ್ರತಿಕ್ರಿಯಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಕಮಲ್‌, ʼಆತ್ಮೀಯ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರೇ, ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟನ್ನು ನೋಡಿಕೊಳ್ಳಿ. ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಸ್ವಂತ ವ್ಯವಹಾರಗಳ ಕಡೆ ಗಮನಹರಿಸಿʼ ಎಂದು ಕಿಡಿಕಾರಿದ್ದಾರೆ.

ನಾವು ಭಾರತದವರು, ಸ್ವತಂತ್ರ ಮತ್ತು ಸಾರ್ವಭೌಮ ರಾಷ್ಟ್ರಕ್ಕೆ ಸೇರಿದವರು. ನಾವು ಇನ್ನು ಮುಂದೆ ದೂರ ತೀರದ ವಿದೇಶಿ ರಾಷ್ಟ್ರಗಳ ಆದೇಶಗಳನ್ನು ತೆಗೆದುಕೊಳ್ಳುವುದಿಲ್ಲ ಎಂದಿದ್ದಾರೆ.

ಸಾರ್ವಭೌಮ ರಾಷ್ಟ್ರಗಳ ನಡುವಿನ ಪರಸ್ಪರ ಗೌರವದಿಂದ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ ಎಂದು ಕಮಲ್‌ ಹಾಸನ್‌ ಹೇಳಿದ್ದಾರೆ.

ನಿಮ್ಮ ದೇಶ (ಅಮೆರಿಕ) ಮತ್ತು ಅಲ್ಲಿನ ಜನರ ಶಾಂತಿ ಮತ್ತು ಸಮೃದ್ಧಿಯನ್ನು ನಾವು ಬಯಸುತ್ತೇವೆ ಎಂದೂ ಕಮಲ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

'ಪಶ್ಚಿಮ ಏಷ್ಯಾ ಯುದ್ಧ ಮುಂದುವರಿದಿರುವುದರಿಂದ ಮಾರುಕಟ್ಟೆಯಲ್ಲಿ ತೈಲದ ಕೊರತೆ ಉಂಟಾಗದಂತೆ ನೋಡಿಕೊಳ್ಳಲು ಈ ಕ್ರಮ ವಹಿಸಲಾಗಿದ್ದು, ಭಾರತದ ತೈಲ ಸಂಸ್ಕರಣ ಕಂಪನಿಗಳು ರಷ್ಯಾದಿಂದ ಕಚ್ಚಾ ತೈಲ ಮತ್ತು ಪೆಟ್ರೋಲಿಯಂ ಉತ್ಪನ್ನಗಳನ್ನು ಮಾ.5ರಿಂದ ಅನ್ವಯವಾಗುವಂತೆ ಮುಂದಿನ ಒಂದು ತಿಂಗಳು ಖರೀದಿಸಬಹುದು' ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್‌ ಬೆಸೆಂಟ್‌ ಹೇಳಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries