ಸಮಾಲಖಾ(PTI): ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್‌ಎಸ್‌ಎಸ್) ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಉನ್ನತ ಸಮಿತಿ 'ಅಖಿಲ ಭಾರತೀಯ ಪ್ರತಿನಿಧಿ ಸಭಾ'ದ(ಎಬಿಪಿಎಸ್) ಮೂರು ದಿನಗಳ ಸಮಾವೇಶ ಇದೇ 13ರಿಂದ ಹರಿಯಾಣದ ಸಮಾಲಖಾದಲ್ಲಿ ನಡೆಯಲಿದೆ.
ಕಳೆದ ವರ್ಷ ಸಂಘ ಕೈಗೊಂಡಿದ್ದ ಕಾರ್ಯಗಳು ಹಾಗೂ ಭವಿಷ್ಯದ ಯೋಜನೆಗಳ ಕುರಿತು ಈ ಸಮಾವೇಶದಲ್ಲಿ ಚರ್ಚಿಸಲಾಗುತ್ತದೆ ಎಂದು ಸಂಘಟನೆಯ ಅಖಿಲ ಭಾರತೀಯ ಪ್ರಚಾರ ಪ್ರಮುಖ ಸುನಿಲ್ ಅಂಬೇಕರ್ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ತಿಳಿಸಿದರು.

