HEALTH TIPS

ಶಬರಿಮಲೆ ವಿಚಾರದಲ್ಲಿ ಮೌನವಾಗಿರುವ ಮೋದಿಗೆ ಧರ್ಮದ ಬಗ್ಗೆ ಕಾಳಜಿ ಇಲ್ಲ: ರಾಹುಲ್

 ಪತ್ತನಂತಿಟ್ಟ: ಪ್ರಧಾನಿ ನರೇಂದ್ರ ಮೋದಿ ಅವರು ಶಬರಿಮಲೆ ವಿಚಾರದಲ್ಲಿ ಮೌನವಹಿಸಿದ್ದು, ಧರ್ಮದ ಬಗ್ಗೆ ಅವರಿಗೆ ಕಿಂಚಿತ್ತು ಕಾಳಜಿ ಇಲ್ಲ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. 


ಅಡೂರ್‌ನಲ್ಲಿ ನಡೆದ ಯುಡಿಎಫ್ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್, ಕಾಂಗ್ರೆಸ್‌ ಈ ಬಾರಿ ಚುನಾವಣೆಯಲ್ಲಿ ಸಿಪಿಐ(ಎಂ)- ಬಿಜೆಪಿಯನ್ನು ಎದುರಿಸುತ್ತಿದೆ ಎಂದು ಹೇಳಿದ್ದಾರೆ.

ಕೇರಳ ಭೇಟಿ ವೇಳೆ ಪ್ರಧಾನಿ ಮೋದಿ ಶಬರಿಮಲೆ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಹೇಳಿಕೆಗಳನ್ನು ನೀಡದೆ ಇರುವುದು ಎಲ್‌ಡಿಎಫ್ ಜತೆ ಬಿಜೆಪಿ ಒಟ್ಟಾಗಿ ಕೆಲಸ ಮಾಡುತ್ತಿದೆ ಎಂದು ರಾಹುಲ್‌ ಆರೋಪಿಸಿದ್ದಾರೆ.

ಹಿಂದಿ ಹೇರಿಕೆ ಬೇಡ: ಸರ್ಕಾರದ ನಿರ್ಧಾರಕ್ಕೆ ನಟಿ ಪೂಜಾಗಾಂಧಿ ಬೆಂಬಲಡಿಕೆಡಿ ಸ್ಪರ್ಧಿಗಳಿಗೆ ಶಿವಣ್ಣ ದಂಪತಿಯಿಂದ ₹ 50 ಸಾವಿರ ಧನ ಸಹಾಯ

ಕಾಂಗ್ರೆಸ್‌ ಪಕ್ಷವು ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನ ಸೈದ್ಧಾಂತಿಕ ವಿಷಯಗಳ ವಿರುದ್ಧ ಹೋರಾಟ ನಡೆಸುತ್ತಿದೆ ಎಂದು ರಾಹುಲ್‌ ಹೇಳಿದ್ದಾರೆ.

ಪ್ರಧಾನಿ ಮೋದಿ ಅವರಿಗೆ ಧರ್ಮ ಮತ್ತು ದೇವಾಲಯಗಳು ಕೇವಲ ಮತ ಗಳಿಕೆಯ ಸಾಧನಗಳು. ಚುನಾವಣೆ ಸಂದರ್ಭದಲ್ಲಿ ಲಾಭವಾಗುತ್ತದೆ ಎಂದರೆ ಮಾತ್ರ ಮಾತನಾಡುತ್ತಾರೆ. ವಾಸ್ತವವನ್ನು ಅವರು ಎಂದೂ ಮಾತನಾಡುವುದಿಲ್ಲ ಎಂದು ಕಿಡಿಕಾರಿದ್ದಾರೆ.

ಯುಡಿಎಫ್ ಅಧಿಕಾರಕ್ಕೆ ಬಂದಾಗ ದೇವಾಲಯಕ್ಕೆ ಸಂಬಂಧಿಸಿದ ಅಕ್ರಮಗಳಿಗೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries