HEALTH TIPS

ಯುಎಇ ಪ್ರಮುಖ ಇಂಧನ, ಮೂಲಸೌಕರ್ಯ ಕೇಂದ್ರಗಳ ಮೇಲೆ ದಾಳಿ: ಇರಾನ್‌ ಎಚ್ಚರಿಕೆ

 ದುಬೈ: ಪಶ್ಚಿಮ ಏಷ್ಯಾದಲ್ಲಿ ಸಂಘರ್ಷದ ಉದ್ವಿಗ್ನತೆ ಹೆಚ್ಚಾಗುತ್ತಿದೆ. ಅಮೆರಿಕವು ತನ್ನ ಭೂಪ್ರದೇಶದ ಹಾಗೂ ವಿದ್ಯುತ್‌ ಸ್ಥಾವರಗಳ ಮೇಲೆ ದಾಳಿ ನಡೆಸಿದರೆ ಯುನೈಟೆಡ್ ಅರಬ್ ಎಮಿರೇಟ್ಸ್‌ನ (ಯುಎಇ) ಪ್ರಮುಖ ಇಂಧನ ಮತ್ತು ಮೂಲಸೌಕರ್ಯ ಕೇಂದ್ರಗಳ ಮೇಲೆ ದಾಳಿ ನಡೆಸುವುದಾಗಿ ಇರಾನ್ ಎಚ್ಚರಿಕೆ ನೀಡಿದೆ. 


ದುಬೈನ ಜೆಬೆಲ್ ಅಲಿ ವಿದ್ಯುತ್ ಮತ್ತು ಉಪ್ಪುನೀರು ಶುದ್ಧೀಕರಣ ಸಂಕೀರ್ಣ, ಅಬುಧಾಬಿಯ ಬರಾಕಾ ಪರಮಾಣು ವಿದ್ಯುತ್ ಸ್ಥಾವರ, ಅಲ್ ತವೀಲಾ ವಿದ್ಯುತ್ ಕೇಂದ್ರ, ದುಬೈನ ಎಂ ಸ್ಟೇಷನ್ ಮತ್ತು ಮೊಹಮ್ಮದ್ ಬಿನ್ ರಶೀದ್ ಸೋಲಾರ್ ಪಾರ್ಕ್ ಸೇರಿದಂತೆ ಐದು ಪ್ರಮುಖ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಇರಾನ್‌ನ ಸರ್ಕಾರಿ ಸ್ವಾಮ್ಯದ ಫಾರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ. 

ಮತ್ತೊಂದೆಡೆ, ಪಶ್ಚಿಮ ಏಷ್ಯಾದಲ್ಲಿ ಸುಮಾರು 10,000 ಹೆಚ್ಚುವರಿ ಸೈನಿಕರನ್ನು ನಿಯೋಜಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಲೋಚಿಸುತ್ತಿದ್ದಾರೆ ಎಂದು ವರದಿಯಾಗಿದೆ. ಈಗಾಗಲೇ ಈ ಭಾಗದಲ್ಲಿ ಸುಮಾರು 50,000 ಅಮೆರಿಕನ್ ಸೈನಿಕರು ನಿಯೋಜನೆಗೊಂಡಿದ್ದಾರೆ. ವಿಶ್ವದ ಪ್ರಮುಖ ಹಡಗು ಮಾರ್ಗವಾದ ಹಾರ್ಮುಜ್ ಜಲಸಂಧಿಯ ಭದ್ರತೆಗಾಗಿ ಹೆಚ್ಚುವರಿ ಸೇನೆಯನ್ನು ಬಳಸಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

'ಅಮೆರಿಕ ಮುಂದಿಟ್ಟಿರುವ ಕದನ ವಿರಾಮ ಒಪ್ಪಂದ ಮಾತುಕತೆ ಪ್ರಸ್ತಾವವನ್ನು ಇರಾನ್‌ ಗಂಭೀರವಾಗಿ ಪರಿಗಣಿಸಬೇಕು' ಎಂದು ಟ್ರಂಪ್‌ ಈ ಮೊದಲು ಎಚ್ಚರಿಕೆ ನೀಡಿದ್ದರು. ನಂತರ ಮಾತುಕತೆ ಚೆನ್ನಾಗಿ ನಡೆಯುತ್ತಿವೆ ಎಂದು ಈಗ 10 ದಿನ ದಾಳಿಯನ್ನು ನಿಲ್ಲಿಸುವುದಾಗಿ ಹೇಳಿದ್ದಾರೆ.

ಇತ್ತೀಚೆಗೆ ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಆಯತೊಲ್ಲಾ ಅಲಿ ಖಮೇನಿ ಹತ್ಯೆಗೀಡಾಗಿದ್ದರು. 








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries