HEALTH TIPS

ಸಮಯವೇ ಎಲ್ಲದಕ್ಕೂ ಉತ್ತರ ನೀಡಲಿದೆ..ರಜನಿಕಾಂತ್‌ ಹೀಗೆ ಹೇಳಿದ್ದು ಏಕೆ?

 ಚೆನ್ನೈ: ಸೂಪರ್‌ಸ್ಟಾರ್‌ ರಜನಿಕಾಂತ್‌ ಅವರು ರಾಜಕೀಯಕ್ಕೆ ಪ್ರವೇಶಿಸಲು ಯತ್ನಿಸಿದಾಗ ಡಿಎಂಕೆ ಪಕ್ಷದಿಂದ ಬೆದರಿಕೆ ಬಂದಿತ್ತು ಎಂದು ಟಿವಿಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಆಧವ್ ಅರ್ಜುನ ಆರೋಪಿಸಿದ್ದಾರೆ.


ಈ ವಿವಾದದ ಬೆನ್ನಲ್ಲೇ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ರಜನಿಕಾಂತ್, ಈ ಹೇಳಿಕೆಯು ಸತ್ಯಕ್ಕೆ ದೂರದ ಮಾತು.

ಎಲ್ಲದಕ್ಕೂ ಕಾಲವೇ ಉತ್ತರಿಸಲಿದೆ ಎಂದು ಹೇಳುವ ಮೂಲಕ ಆರೋಪವನ್ನು ನಿರಾಕರಿಸಿದ್ದಾರೆ.

ಇರಾನ್‌ನ ರಹಸ್ಯ ಸ್ಥಳದಲ್ಲಿ ಮೊಜ್ತಬಾ ಖಮೇನಿ; ಗಾಯಗೊಂಡಿರುವ ಶಂಕೆ?ಆಕಾಶದಾಚೆ ಹುಡುಕುವ ಅವಶ್ಯಕತೆ ಇಲ್ಲ: ಅಪ್ಪು ಜನ್ಮದಿನಕ್ಕೆ ಶುಭಕೋರಿದ ಶಿವಣ್ಣ

ಅರ್ಜುನ ಅವರು ನನ್ನ ಬಗ್ಗೆ ಸುಳ್ಳು ಹೇಳಿಕೆ ನೀಡಿದ್ದಾರೆ. ಸಮಯವೇ ಎಲ್ಲದಕ್ಕೂ ಉತ್ತರ ನೀಡಲಿದೆ ಎಂದು ಹೇಳುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ.

ರಜನಿಕಾಂತ್ ಅವರು 2017 ಡಿಸೆಂಬರ್‌ನಲ್ಲಿ ರಾಜಕೀಯ ಪ್ರವೇಶಿಸುವುದಾಗಿ ಘೋಷಿಸಿದ್ದರು. ಆದರೆ, ಅನಾರೋಗ್ಯದ ಕಾರಣದಿಂದ 2020ರ ಡಿಸೆಂಬರ್‌ನಲ್ಲಿ ರಾಜಕೀಯದಿಂದ ಹಿಂದೆ ಸರಿದರು ಎಂದು ವರದಿಯಾಗಿತ್ತು.

ನಟ 'ದಳಪತಿ' ವಿಜಯ್‌ ಅವರು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮೂಲಕ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಪ್ರಚಾರ ಸಮಾವೇಶಗಳಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ಜಮಾಯಿಸುತ್ತಿದ್ದಾರೆ. ಟಿವಿಕೆ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ತಂತ್ರ ರೂಪಿಸಿತ್ತು. ಆದರೆ ಟಿವಿಕೆ ಈ ಆಫರ್‌ ಅನ್ನು ನಿರಾಕರಿಸಿದೆ ಎನ್ನಲಾಗಿದೆ.

ತಮಿಳುನಾಡಿನ 234 ಸ್ಥಾನಗಳಿಗೆ ಏಪ್ರಿಲ್‌ 23ರಂದು ಚುನಾವಣೆ ನಡೆಯಲಿದ್ದು, ಮೇ 4ರಂದು ಫಲಿತಾಂಶ ಹೊರಬೀಳಲಿದೆ. 









ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries