ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾರೂಢ ಡಿಎಂಕೆ ತನ್ನ ಮೈತ್ರಿ ಪಕ್ಷ ಸಿಪಿಐಗೆ ಐದು ಕ್ಷೇತ್ರಗಳನ್ನು ನೀಡಿದೆ.
ಈ ಬಗ್ಗೆ ಡಿಎಂಕೆ ಬುಧವಾರ ಪ್ರಕಟಣೆ ಹೊರಡಿಸಿದೆ. ಎರಡೂ ಪಕ್ಷಗಳ ನಡುವೆ ಹಲವು ಸುತ್ತಿನ ಮಾತುಕತೆಗಳ ಬಳಿಕ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಡಿಎಂಕೆ ಹೇಳಿದೆ.
ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಐದು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದ್ದು ಆ ಕ್ಷೇತ್ರಗಳ ಹೆಸರನ್ನು ಇನ್ನು ಬಹಿರಂಗಪಡಿಸಿಲ್ಲ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಿಪಿಐ ಆರು ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತು. 2026ರ ತಮಿಳುನಾಡು ವಿಧಾನಸಭೆ ಚುನಾವಣೆ ಏಪ್ರಿಲ್ 23ರಂದು ನಡೆಯಲಿದೆ.
பத்திரிகைச் செய்தி
சட்டப்பேரவைத் தேர்தல் - 2026
மதச்சார்பற்ற முற்போக்குக் கூட்டணியில் இடம்பெற்றுள்ள இந்திய கம்யூனிஸ்ட் கட்சி தொகுதி பங்கீடு

