ನವದೆಹಲಿ: ಶನಿವಾರ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರಿಗೆ ದೂರವಾಣಿ ಮೂಲಕ ಈದ್ ಮತ್ತು ನೌರುಜ್ ಶುಭಾಶಯ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ, ಈ ಹಬ್ಬದ ಋತುವು ಪಶ್ಚಿಮ ಏಷ್ಯಾಕ್ಕೆ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ತರಲಿ ಎಂದು ಆಶಿಸಿದ್ದಾರೆ.
ಇದೇವೇಳೆ, ಪ್ರಾದೇಶಿಕ ಸ್ಥಿರತೆಗೆ ಬೆದರಿಕೆ ಹಾಕುವ ಮತ್ತು ಜಗತ್ತಿನ ನಿರ್ಣಾಯಕ ಪೂರೈಕೆ ಮೂಲಸೌಕರ್ಯಗಳ ಮೇಲಿನ ದಾಳಿಗಳನ್ನು ಖಂಡಿಸಿದ್ದಾರೆ.
ನೌಕಾಯಾನ ಸ್ವಾತಂತ್ರ್ಯವನ್ನು ಕಾಪಾಡುವ ಮತ್ತು ಹಡಗು ಮಾರ್ಗಗಳು ಮುಕ್ತ ಮತ್ತು ಸುರಕ್ಷಿತವಾಗಿರುವುದನ್ನು ಖಚಿತಪಡಿಸಿಕೊಳ್ಳುವ ಮಹತ್ವವನ್ನು ಪುನರುಚ್ಚರಿಸಿದ್ದಾರೆ.
'ಇರಾನ್ ಅಧ್ಯಕ್ಷ ಡಾ. ಮಸೌದ್ ಪೆಜೆಶ್ಕಿಯಾನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದೆ. ಈದ್ ಮತ್ತು ನೌರುಜ್ ಶುಭಾಶಯಗಳನ್ನು ತಿಳಿಸಿದೆ. ಈ ಹಬ್ಬದ ಋತುವು ಪಶ್ಚಿಮ ಏಷ್ಯಾಕ್ಕೆ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ತರುತ್ತದೆ ಎಂದು ನಾವು ಆಶಿಸುತ್ತೇವೆ' ಎಂದು ಪ್ರಧಾನಿ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಪ್ರಾದೇಶಿಕ ಸ್ಥಿರತೆಗೆ ಬೆದರಿಕೆ ಹಾಕುವ ಮತ್ತು ಜಾಗತಿಕ ಪೂರೈಕೆ ಸರಪಳಿಗಳನ್ನು ಅಡ್ಡಿಪಡಿಸುವ ಪ್ರದೇಶದಲ್ಲಿನ ನಿರ್ಣಾಯಕ ಮೂಲಸೌಕರ್ಯಗಳ ಮೇಲಿನ ದಾಳಿಗಳನ್ನು ಖಂಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಇರಾನ್‌ನಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆಗೆ ಇರಾನ್‌ನ ನಿರಂತರ ಬೆಂಬಲವನ್ನು ಪ್ರಧಾನಿ ಶ್ಲಾಘಿಸಿದ್ದಾರೆ.
ಫೆಬ್ರುವರಿ 28ರಂದು ಅಮೆರಿಕ, ಇಸ್ರೆಆಲ್ ಮತ್ತು ಇರಾನ್ ನಡುವೆ ಸಂಘರ್ಷ ಆರಂಭವಾದಾಗಿನಿಂದ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಇರಾನ್ ಅಧ್ಯಕ್ಷ ಅಧ್ಯಕ್ಷರ ನಡುವಿನ ಎರಡನೇ ದೂರವಾಣಿ ಸಂಭಾಷಣೆ ಇದಾಗಿದೆ.
ಮಾರ್ಚ್ 12ರಂದು ಇರಾನ್‌ನ ಸದ್ಯದ ಪರಿಸ್ಥಿತಿ ಬಗ್ಗೆ ಪೆಜೆಸ್ಕಿಯಾನ್ ಅವರು ಪ್ರಧಾನಿ ಮೋದಿಗೆ ವಿವರಣೆ ನೀಡಿದ್ದರು. ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದರು.

