HEALTH TIPS

ಮಂಜೇಶ್ವರ: ಸ್ಪರ್ಧೆಯಿಂದ ಹಿಂದಕ್ಕೆ ಸರಿದ ಎಸ್‌ಡಿಪಿಐ; ಅಭ್ಯರ್ಥಿ ಕೆ. ಎಂ ಅಶ್ರಫ್ ರಾಜೀನಾಮೆ

ಮಂಜೇಶ್ವರ: ಮಂಜೇಶ್ವರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸದಿರಲು ಎಸ್‌ಡಿಪಿಐ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿ ಕೆ. ಎಂ ಅಶ್ರಫ್ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ.


ರಾಜ್ಯ ಘಟಕದ ನಿರ್ದೇಶನದ ಮೇರೆಗೆ ತಾವು ಚುನಾವಣಾ ಕಣದಿಂದ ಹಿಂದೆ ಸರಿಯುತ್ತಿರುವುದಾಗಿ ಅಶ್ರಫ್ ಸ್ಪಷ್ಟಪಡಿಸಿದ್ದಾರೆ.

ಈ ಬೆಳವಣಿಗೆಯ ಬೆನ್ನಲ್ಲೇ ಅಶ್ರಫ್ ಅವರು ಪಕ್ಷದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯತ್ವ ಸೇರಿದಂತೆ ತಮ್ಮ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಇಂದು ಕೊನೆಯ ದಿನವಾಗಿದ್ದು, ಅವರು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಪ್ರಕ್ರಿಯೆ ಪೂರ್ಣಗೊಳಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಮಂಜೇಶ್ವರದಲ್ಲಿ ಯುಡಿಎಫ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇಲ್ಲಿ ಎಸ್‌ಡಿಪಿಐ ಸ್ಪರ್ಧಿಸಿದರೆ ಮತಗಳು ವಿಭಜನೆಯಾಗಿ ಬಿಜೆಪಿಗೆ ಲಾಭವಾಗಬಹುದು ಎಂಬ ಆತಂಕವಿತ್ತು. ಈ ಹಿನ್ನೆಲೆಯಲ್ಲಿ ಜಾತ್ಯತೀತ ಮತಗಳ ವಿಭಜನೆ ತಡೆಯಲು ಅಭ್ಯರ್ಥಿಯನ್ನು ಕಣದಿಂದ ಇಳಿಸುವಂತೆ ಎಸ್ಡಿಪಿಐ ಮೇಲೆ ರಾಜಕೀಯ ಒತ್ತಡವಿತ್ತು ಎನ್ನಲಾಗಿದೆ.

ಆದರೆ, ರಾಜ್ಯ ಘಟಕದ ಈ ಏಕಪಕ್ಷೀಯ ತೀರ್ಮಾನಕ್ಕೆ ಮಂಜೇಶ್ವರದ ಸ್ಥಳೀಯ ಘಟಕದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಅಭ್ಯರ್ಥಿಯನ್ನು ಕಣಕ್ಕಿಳಿಸಿ ನಂತರ ನಾಮಪತ್ರ ಹಿಂಪಡೆಯುವ ನಿರ್ಧಾರವು ಕಾರ್ಯಕರ್ತರಲ್ಲಿ ಗೊಂದಲ ಮತ್ತು ಭಿನ್ನಮತಕ್ಕೆ ಕಾರಣವಾಗಿದೆ ಎಂದು ತಿಳಿದು ಬಂದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries