ಕಾಸರಗೋಡು: ಚುನಾವಣಾ ಸಿದ್ಧತೆಯ ಪೂರ್ವಭಾವಿಯಾಗಿ ಬಿಜೆಪಿ ಕಾಸರಗೋಡು ಮಂಡಲ ಸಮಿತಿ ವತಿಯಿಂದ ಕಾರ್ಯಾಗಾರ ಬಿಜೆಪಿ ಕಾಸರಗೋಡು ಜಿಲ್ಲಾ ಕಚೇರಿ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಮಂದಿರದಲ್ಲಿ ಜರುಗಿತು.
ಕಾಸರಗೋಡು ವಿಧಾನಸಭಾ ಕ್ಷೇತ್ರದ ಚುನಾವಣಾ ಚಟುವಟಿಕೆಗಳ ಉಸ್ತುವಾರಿ ಹೊತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಚ ಕಾರ್ಯಾಗಾರ ಉದ್ಘಾಟಿಸಿದರು.ಕಾಸರಗೋಡು ಮಂಡಲ ಸಮಿತಿ ಅಧ್ಯಕ್ಷ ಗುರುಪ್ರಸಾದ್ ಪ್ರಭು ಅಧ್ಯಕ್ಷತೆ ವಹಿಸಿದ್ದರು.
ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ಅಧ್ಯಕ್ಷೆ ಎಂ.ಎಲ್.ಅಶ್ವಿನಿ, ಕೋಯಿಕ್ಕೋಡ್ ವಲಯ ಪ್ರಧಾನ ಕಾರ್ಯದರ್ಶಿ ಸುಧಾಮ ಗೋಸಾಡ, ಜಯಪ್ರಕಾಶ್, ಜಿಲ್ಲಾ ಕೋಶದ ಸಂಯೋಜಕ ಸುಕುಮಾರ್ ಕುದುರೆಪ್ಪಾಡಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಶೇಖರ, ಶ್ರೀಧರ ಕೂಡ್ಲು ಉಪಸ್ಥಿತರಿದ್ದರು.



