HEALTH TIPS

ಮಲಯಾಳ ಭಾಷಾ ಮಸೂದೆ ಗಡಿನಾಡ ಕನ್ನಡಿಗರಿಗೆ ಮಾರಕ-ಮಸೂದೆಯ ವಿರುದ್ಧ ಕನ್ನಡಿಗರ ಪ್ರತಿಭಟನೆ- ಪ್ರಬಲ ಹೋರಾಟದ ಎಚ್ಚರಿಕೆ

ಕಾಸರಗೋಡು: ಕೇರಳ ಸರ್ಕಾರದ ಮಲಯಾಳ ಭಾಷಾ ಮಸೂದೆಯು ಕಾಸರಗೋಡಿನ ಕನ್ನಡಿಗರ  ಹಿತಕ್ಕೆ ಮಾರಕವಾದುದು. ಒಂದರಿಂದ ಹತ್ತನೇ ತರಗತಿಯ ತನಕ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಲಯಾಳ ಕಡ್ಡಾಯಗೊಳಿಸುವ ಪ್ರಸ್ತಾಪದಿಂದ ಕಾಸರಗೋಡಿನ ಭಾಷಾ ಅಲ್ಪಸಂಖ್ಯಾತ ಪ್ರದೇಶವನ್ನು ಹೊರತುಪಡಿಸಬೇಕು ಎಂದು ಕನ್ನಡ ಭವನ ಮತ್ತು ಗ್ರಂಥಾಲಯದ ಸ್ಥಾಪಕ ಅಧ್ಯಕ್ಷ ಡಾ. ವಾಮನರಾವ್ ಬೇಕಲ್ ತಿಳಿಸಿದ್ದಾರೆ. 


ಅವರು ಮಲಯಾಳ ಭಾಷಾ ಮಸೂದೆಯ ವಿರುದ್ಧ ಕಾಸರಗೋಡಿನ ಕನ್ನಡ ಭವನದಲ್ಲಿ ನಡೆದ ಕನ್ನಡಿಗರ ಪ್ರತಿಭಟನಾ ಸಭೆಯನ್ನು ಕನ್ನಡ ಧ್ವಜವನ್ನು ಹಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. 

ಗಡಿನಾಡಿನಲ್ಲಿ ಭಾಷಾ ಅಲ್ಪಸಂಖ್ಯಾತರಿಗೆ  ಮಲಯಾಳ ಕಡ್ಡಾಯಗೊಳಿಸುವುದು ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕು ಕಸಿಯುವುದಕ್ಕೆ ಸಮಾನವಾಗಿದೆ. ಗಡಿನಾಡು ಕಾಸರಗೋಡಿನ ಕನ್ನಡಿಗರ ಹಕ್ಕು ಹಾಗೂ ಸಂವಿಧಾನಾತ್ಮಕ ಸವಲತ್ತುಗಳನ್ನು ಕಸಿದುಕೊಳ್ಳುವ ಸರ್ಕಾರದ ತೀರ್ಮನದ ವಿರುದ್ಧ ಪ್ರಬಲ ಹೋರಾಟ ನಡೆಸಲಾಗುವುದು ಎಂದುತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ,  ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧ್ಯಕ್ಷ ಸುಕೇಶ.ಎ, ಅಧಿಕೃತ ವಕ್ತಾರ ಬಾಬು, ನೌಕರರ ಸಂಘದ ಮಾಜಿ ಅಧ್ಯಕ್ಷರು ಜಯನಾರಾಯಣ ತಾಯನ್ನೂರ್,  ಕನ್ನಡ ಪತ್ರಕರ್ತರ ಕ್ಷೇಮಾಭ್ಯುದಯ ಸಂಘದ ಅಧ್ಯಕ್ಷ ರವಿ ನಾಯ್ಕಾಪು, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ.ಆರ್ ಸುಬ್ಬಯಕಟ್ಟೆ, ಗಮಕ ಕಲಾಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ತೆಕ್ಕೇಕರೆ ಶಂಕರ ನಾರಾಯಣ ಭಟ್, ಧಾರ್ಮಿಕ ಮುಂದಾಳು ಡಾ. ಕೆ .ಎನ್ ವೆಂಕಟರಮಣ ಹೊಳ್ಳ, ನಿವೃತ್ತ ಮುಖ್ಯ ಶಿಕ್ಷಕ ಸತೀಶ್ ಮಾಸ್ಟರ್, ನುಳ್ಳಿಪ್ಪಾಡಿ ನೇತಾಜಿ ರೆಸಿಡೆನ್ಸ್ ಅಧ್ಯಕ್ಷ ಶಶಿಕಾಂತ ಶೆಟ್ಟಿ, ಧೂಮಾವತಿ ದೈವಸ್ಥಾನದ ಮೊಕ್ತೇಸರ ಗೋಪಾಲ ಶೆಟ್ಟಿ, ಮಾಜಿ ನಗರಸಭಾ ಸದಸ್ಯ ಶಂಕರ ಜೆ.ಪಿ ನಗರ, ನಗರಸಭಾ ಸದಸ್ಯರಾದ ಸುಧಾರಾಣಿ ಅಣಂಗೂರು, ಶ್ರುತಿ ವಿಕಾಸ್, ದಿವ್ಯಾ ಸಂದೀಪ್, ಕಾಸರಗೋಡು ಜಿಲ್ಲಾ ಮಚೆರ್ಂಟ್ಸ್ ಮಹಿಳಾ ವಿಂಗ್ ಅಧ್ಯಕ್ಷೆ  ಆಶಾ ರಾಧಾಕೃಷ್ಣ, ರಾಮರಾಜ ಕ್ಷತ್ರಿಯ ಜಿಲ್ಲಾ ಸಂಘದ ಅಧ್ಯಕ್ಷ ಪ್ರದೀಪ್ ಬೇಕಲ್, ರಾಜೇಶ್ ಕೋಟೆಕಣಿ, ಶಶಿಕಲಾ ಟೀಚರ್ ಕುಂಬ್ಳೆ ಉಪಸ್ಥಿತರಿದ್ದರು.

ಈ ಸಂದರ್ಭ ಗುರುರಾಜ್, ಉಷಾ ಕಿರಣ್,ಕು.ಮೋಕ್ಷ  ಮೊದಲಾದವರು ಕನ್ನಡ ಗೀತೆಗಳ ಗಾಯನ ನಡೆಸಿದರು. ಕನ್ನಡ ಭವನದ ಕೋಶಾಧಿಕಾರಿ ಸಂಧ್ಯಾ ರಾಣಿ ಟೀಚರ್ ಸ್ವಾಗತಿಸಿದರು. ಕಾರ್ಯದರ್ಶಿ ವಸಂತ ಕೆರೆಮನೆ ವಂದಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries