HEALTH TIPS

ಮಲಯಾಳ ಭಾಷಾ ಮಸೂದೆ ವಿರುದ್ಧ ಉಚ್ಚ ನ್ಯಾಯಾಲಯದಲ್ಲಿ ರಿಟ್-ತಜ್ಞರ ಸಮಿತಿ ಸಭೆ

ಕಾಸರಗೋಡು: ಕೇರಳ ಸರ್ಕಾರದ  ಮಲಯಾಳ ಭಾಷಾ  ಮಸೂದೆಯ ವಿರುದ್ಧ ಕಾಸರಗೋಡಿನ ಕನ್ನಡಿಗರು ಮತ್ತು ಕನ್ನಡ ಸಂಘಟನೆಗಳು ತಮ್ಮ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಕುರಿತು ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಲು ಕೈಗೊಂಡಿರುವ ತೀರ್ಮಾನದನ್ವಯ ತಜ್ಞರ ಸಮಿತಿ ಸಭೆ ನಡೆಸಲಾಯಿತು. ಕರ್ನಾಟಕ ಸಮಿತಿ ಅಧ್ಯಕ್ಷ  ಕೆ. ಮುರಳೀಧರ ಬಳ್ಳಕ್ಕುರಾಯ ಅಧ್ಯಕ್ಷತೆ ವಹಿಸಿದ್ದರು. 

ಕನ್ನಡಿಗರ ಪಾಲಿಗೆ ಮಾರಕವಾಗಿರುವ ಈ ಮಸೂದೆಯು ಕನ್ನಡ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳಿಗೆ ಧಕ್ಕೆ ತರುವ ಸಾಧ್ಯತೆ ಇದೆ. ಮಸೂದೆಯಲ್ಲಿರುವ ವಿಧಿಗಳು ಸಂವಿಧಾನಾತ್ಮಕ ಹಕ್ಕುಗಳಿಗೆ ವಿರುದ್ಧವಾಗಿದ್ದು, ಕನ್ನಡ ಭಾಷೆಯ ಬಳಕೆ ಮತ್ತು ಅಭಿವೃದ್ದಿಗೆ ಅಡ್ಡಿಯಾಗಬಹುದು ಎಂಬ ಆತಂಕ ವ್ಯಕ್ತಪಡಿಸಲಾಯಿತು. 

ಈ ಕುರಿತು ಕನ್ನಡ ಸಂಘಟನೆಗಳ ಪ್ರತಿನಿಧಿಗಳು ಈಗಾಗಲೇ ಎರಡು ಸಭೆಗಳನ್ನು ಆಯೋಜಿಸಿ,  ಮಸೂದೆಯ ಲೋಪದೋಷಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಎರಡನೇ ಸಭೆಯಲ್ಲಿ ಕಾನೂನು ಹೋರಾಟ ಕೈಗೊಳ್ಳುವ ನಿರ್ಧಾರದನ್ವಯ, ಈ ನಿಟ್ಟಿನಲ್ಲಿ ಮುಂದುವರಿಯುವ ಬಗ್ಗೆ ಸಮಾಲೋಚಿಸಲು ತಜ್ಞರ ಸಭೆ ಆಯೋಜಿಸಲಾಗಿತ್ತು.   ತಜ್ಞರ ಸಮಿತಿಯು ಮಸೂದೆಯನ್ನು ಪರಿಶೀಲಿಸಿ, ಇದು ಸಂವಿಧಾನ ವಿರೋಧಿ ಹಾಗೂ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳಿಗೆ ಚ್ಯುತಿ ತರುವಂತದ್ದು ಎಂದು ಅಭಿಪ್ರಾಯ ವ್ಯಕ್ತಪಡಿಸಲಾಯಿತು. ಈ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಲಿರುವ ಎಲ್ಲಾ ಪೂರ್ವ ಸಿದ್ಧತೆಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲೇ ದಾವೆ ಹೂಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಭೆಯಲ್ಲಿ ವ್ಯಕ್ತಪಡಿಸಲಾಯಿತು.

ಸಭೆಯಲ್ಲಿ ನಿವೃತ್ತ ನ್ಯಾಯಾಧೀಶ ರಾಜಕುಮಾರ ಎಂ.ವಿ, ನಿವೃತ್ತ  ಡಿ.ಇ.ಒ, ವಕೀಲ ಎನ್.ಕೆ ಮೋಹನ್ ದಾಸ್, ವಕೀಲ ಸತ್ಯನಾರಾಯಣ ತಂತ್ರಿ, ನಿವೃತ್ತ ಡಿ.ಡಿ.ಇ  ಮಹಾಲಿಂಗೇಶ್ವರ ರಾಜ್ ಡಿ, ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧ್ಯಕ್ಷ ಸುಕೇಶ್ ಎ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ, ಗಮಕ ಪರಿಷತ್ ಕೇರಳ ಗಡಿನಾಡ  ಘಟಕದ ಅಧ್ಯಕ್ಷ ತೆಕ್ಕೇಕೆರೆ ಶಂಕರನಾರಾಯಣ ಭಟ್, ಲೋಕ ಸೇವಾ ಆಯೋಗದ ನಿವೃತ್ತ ಅಧೀನ ಕಾರ್ಯದರ್ಶಿ ಗಣೇಶ್ ಪ್ರಸಾದ್ ಪಾಣೂರು ಮೊದಲಾದವರು ಉಪಸ್ಥಿತರಿದ್ದರು. ಕನ್ನಡ ಪರ ಸಂಘಟನೆಗಳು ಮತ್ತು ಸಾರ್ವಜನಿಕರು ಈ ಕಾನೂನು ಹೋರಾಟಕ್ಕೆ ಎಲ್ಲಾ ರೀತಿಯ ಬೆಂಬಲ ನೀಡುವಂತೆ ಮನವಿ ಮಾಡಿಕೊಳ್ಳಲಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries