ಸೋಲ್: ಉತ್ತರ ಕೊರಿಯಾ ತನ್ನ ಪೂರ್ವ ಕರಾವಳಿಯತ್ತ ಕ್ಷಿಪಣಿ ಉಡಾಯಿಸಿದೆ ಎಂದು ದಕ್ಷಿಣ ಕೊರಿಯಾದ ಸುದ್ದಿ ಸಂಸ್ಥೆ 'Yonhap' ಶನಿವಾರ ವರದಿ ಮಾಡಿದೆ.
ಉತ್ತರ ಕೊರಿಯಾ ಖಂಡಾಂತರ ಕ್ಷಿಪಣಿ ಉಡಾಯಿಸಿರಬಹುದು. ಅದು ಸಮುದ್ರದಲ್ಲಿ ಬಿದ್ದಿರುವ ಸಾಧ್ಯತೆ ಇದೆ ಎಂದು ಕರಾವಳಿ ರಕ್ಷಣಾ ಪಡೆ ಸಿಬ್ಬಂದಿ ತಿಳಿಸಿರುವುದಾಗಿ ಜಪಾನ್ ಸರ್ಕಾರ ಹೇಳಿದೆ.
ಇಸ್ರೇಲ್ ಹಾಗೂ ಅಮೆರಿಕವು ಇರಾನ್ ವಿರುದ್ಧ ಫೆಬ್ರುವರಿ 28ರಂದು ಜಂಟಿಯಾಗಿ ದಾಳಿ ನಡೆಸಿ, ಅದರ ಸರ್ವೋಚ್ಚ ನಾಯಕ ಅಯತೊಲ್ಲ ಅಲಿ ಖಮೇನಿ ಅವರನ್ನು ಹತ್ಯೆ ಮಾಡಿದ್ದವು. ಅದರ ಬೆನ್ನಲ್ಲೇ, ಇರಾನ್ ಪ್ರತಿದಾಳಿ ಆರಂಭಿಸಿದೆ.
ಹೀಗಾಗಿ, ಪಶ್ಚಿಮ ಏಷ್ಯಾದಾದ್ಯಂತ ಉದ್ವಿಗ್ನತೆ ಸೃಷ್ಟಿಯಾಗಿದೆ. ಈ ಹೊತ್ತಿನಲ್ಲಿ ಉತ್ತರ ಕೊರಿಯಾ ಕ್ಷಿಪಣಿ ಉಡಾಯಿಸಿರುವುದು ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.

