ನವದೆಹಲಿ: ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ಕುರಿತು ವಿದೇಶಾಂಗ ಸಚಿವ ಜೈಶಂಕರ್ ಅವರು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೊ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.
ಈ ವೇಳೆ ಪಶ್ಚಿಮ ಏಷ್ಯಾ ಸಂಘರ್ಷವು ಜಾಗತಿಕ ಆರ್ಥಿಕತೆಯ ಮೇಲೆ ಬೀರುವ ಪರಿಣಾಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು ಇರಾನ್‌ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದ ಗಡುವನ್ನು ಐದು ದಿನಗಳವರೆಗೆ ವಿಸ್ತರಿಸಿದ ಕೆಲವೇ ಗಂಟೆಗಳ ಬಳಿಕ ಜೈಶಂಕರ್-ರುಬಿಯೊ ದೂರವಾಣಿ ಮುಲಕ ಮಾತುಕತೆ ನಡೆಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಜೈಶಂಕರ್, ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಅಂತರರಾಷ್ಟ್ರೀಯ ಆರ್ಥಿಕತೆಯ ಮೇಲೆ ಅದರ ಪ್ರಭಾವ ಬೀರುತ್ತದೆ. ವಿಶೇಷವಾಗಿ ಇಂಧನ ಪೂರೈಕೆ ವ್ಯತ್ಯಯ ಬಗ್ಗೆ ರುಬಿಯೊ ಜತೆ ಚರ್ಚಿಸಲಾಯಿತು ಎಂದು ಹೇಳಿದ್ದಾರೆ.

