ಗುರುಗ್ರಾಮ: ಹರಿಯಾಣ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಗೋಡೆ ಕುಸಿದು ಏಳು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುರುಗ್ರಾಮದ ಸಿಧ್ರಾವಲಿ ಪ್ರದೇಶದ ಸಿಗ್ನೇಚರ್ ಗ್ಲೋಬಲ್ ಸೊಸೈಟಿಯಲ್ಲಿ ಸೋಮವಾರ ಸಂಜೆ ಈ ಘಟನೆ ಸಂಭವಿಸಿದೆ.
'12ರಿಂದ 15 ಕಾರ್ಮಿಕರು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದರು. ಆ ಪೈಕಿ ಏಳು ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗಾಯಾಳುಗಳನ್ನು ಭಿವಾಡಿಯ ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರನ್ನು ಸತೀಶ್, ಭಾಗೀರಥ, ಮಿಲನ್, ಶಿವಶಂಕರ್, ಮಂಗಲ್ ಮತ್ತು ಪರಮೇಶ್ವರ್ ಎಂದು ಗುರುತಿಸಲಾಗಿದೆ. ಚೋಟೆಲಾಲ್, ದೀನದಯಾಳ್, ಶಿವಕಾಂತ್ ಮತ್ತು ಇಂದ್ರಜೀತ್ ಎಂಬುವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

