ನವದೆಹಲಿ: ವಿಬಿ ಜಿ ರಾಮ್ ಜಿ ಕಾಯ್ದೆ (ವಿಕಸಿತ್ ಭಾರತ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಕಾಯ್ದೆ) ಲಾಂಛನ (ಲೋಗೊ) ವಿನ್ಯಾಸಗೊಳಿಸುವ ಸ್ಪರ್ಧೆಯನ್ನು ಆರಂಭಿಸಲಾಗಿದೆ ಎಂದು ಕೇಂದ್ರ ಗಾಮೀಣಾಭಿವೃದ್ಧಿ ಸಚಿವಾಲಯ ತಿಳಿಸಿದೆ.
'ಸರ್ಕಾರದ ನಾಗರಿಕ ಸಂಪರ್ಕ ವೇದಿಕೆ MyGov ನಲ್ಲಿ ಸ್ಪರ್ಧೆಯನ್ನು ಆಯೋಜಿಸಲಾಗಿದೆ' ಎಂದು ಸಚಿವಾಲಯ ಶನಿವಾರ 'ಎಕ್ಸ್' ನಲ್ಲಿ ತಿಳಿಸಿದೆ.
ಗ್ರಾಮೀಣ ಸಬಲೀಕರಣ, ಉದ್ಯೋಗ ಸೃಷ್ಟಿ ಮತ್ತು ಸಮಗ್ರ ಅಭಿವೃದ್ಧಿಯ ದೃಷ್ಟಿಕೋನವನ್ನು ಪ್ರತಿಬಿಂಬಿಸುವ ನವೀನ ವಿನ್ಯಾಸಗಳನ್ನು ಸಲ್ಲಿಸುವಂತೆ ಸಚಿವಾಲಯ ಕೋರಿದೆ.
'ವಿಕಸಿತ ಭಾರತ 2047' ಎಂಬ ಸರ್ಕಾರದ ದೂರ ದೃಷ್ಟಿಕೋನಕ್ಕೆ ಹೊಂದಿಕೆಯಾಗುವ ಪ್ರಮುಖ ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮದ ಬ್ರ್ಯಾಂಡಿಂಗ್ ಅನ್ನು ರೂಪಿಸುವುದಕ್ಕಾಗಿ ಸಾರ್ವಜನಿಕ ಭಾಗವಹಿಸುವಿಕೆಯನ್ನು ಉತ್ತೇಜಿಸುವುದು ಈ ಉಪಕ್ರಮದ ಗುರಿಯಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಲಾಂಛನ ವಿನ್ಯಾಸಗಳನ್ನು ಸಲ್ಲಿಸಲು ಕೊನೆಯ ದಿನ ಮಾರ್ಚ್ 20. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ₹50,000 ನಗದು ಬಹುಮಾನವನ್ನು ಘೋಷಿಸಲಾಗಿದೆ.

