ಅಬುಧಾಬಿ: ನೆರೆಯ ರಾಷ್ಟ್ರಗಳ ಮೇಲೆ ಇರಾನ್ ದಾಳಿ ಮುಂದುವರಿದಿದೆ. ಸೋಮವಾರ ಯುನೈಟೆಡ್ ಅರಬ್ ಎಮಿರೇಟ್ಸ್ ರಾಜಧಾನಿ ಅಬುಧಾಬಿಯ ಹೊರವಲಯದಲ್ಲಿ ಕ್ಷಿಪಣಿಯೊಂದು ಕಾರಿಗೆ ಅಪ್ಪಳಿಸಿದ ಪರಿಣಾಮ ಪ್ಯಾಲೆಸ್ಟೀನ್ ನಾಗರಿಕ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಲ್ ಬಹಿಯಾ ಪ್ರದೇಶದಲ್ಲಿ ಕಾರಿನ ಮೇಲೆ ಕ್ಷಿಪಣಿ ದಾಳಿ ನಡೆದಿದ್ದು, ಒಬ್ಬ ಪ್ಯಾಲೆಸ್ಟೀನ್ ಪ್ರಜೆ ಸಾವಿಗೀಡಾಗಿದ್ದಾನೆ. ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಅಬುಧಾಬಿ ಮಾಧ್ಯಮ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

