ಗ್ಯಾಂಗ್ಟಕ್: ಸಿಕ್ಕಿಂನಲ್ಲಿ 4.1 ತೀವ್ರತೆಯ ಲಘು ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಶಾಸ್ತ್ರ ಕೇಂದ್ರ ವರದಿ ಮಾಡಿದೆ.
ಶನಿವಾರ ರಾತ್ರಿ 8.14ರ ವೇಳೆಗೆ ಈ ಭೂಕಂಪನ ಸಂಭವಿಸಿದ್ದು, ಭೂಕಂಪನ ಕೇಂದ್ರವು ಮಾಂಗನ್ ಜಿಲ್ಲೆಯ 14 ಕಿಮೀ ಆಳದಲ್ಲಿ ಕೇಂದ್ರೀಕೃತಗೊಂಡಿತ್ತು ಎಂದು ಹೇಳಲಾಗಿದೆ.
ಈ ಘಟನೆಯಲ್ಲಿ ಇದುವರೆಗೆ ಯಾವುದೇ ಸಾವುನೋವು ಅಥವಾ ಆಸ್ತಿಪಾಸ್ತಿ ಹಾನಿಯ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳೀಯ ನಿವಾಸಿಗಳಿಗೆ ಜಾಗರೂಕತೆಯಿಂದ ಇರುವಂತೆ ಹಾಗೂ ಎಲ್ಲ ಸುರಕ್ಷತಾ ಮುನ್ನೆಚ್ಚರಿಕೆಯನ್ನು ಪಾಲಿಸುವಂತೆ ಸಲಹೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

