HEALTH TIPS

ಗ್ಯಾಸ್ ಟ್ರಬಲ್ ನೀಗಿಸಲು ಅಗತ್ಯ ಸರಕುಗಳ ಕಾಯ್ದೆ ಬಳಸಿದ ಕೇಂದ್ರ

ನವದೆಹಲಿ: ಪೆಟ್ರೋಲಿಯಂ, ಪೆಟ್ರೋಲಿಯಂ ಉತ್ಪನ್ನಗಳು ಮತ್ತು ನೈಸರ್ಗಿಕ ಅನಿಲದ ಲಭ್ಯತೆ, ಪೂರೈಕೆ ಹಾಗೂ ಸಮಾನ ಹಂಚಿಕೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರವು, 1955ರ ಅಗತ್ಯ ಸರಕುಗಳ ಕಾಯ್ದೆಯನ್ನು ಜಾರಿಗೆ ತಂದಿದೆ.

ಈ ಸಂಬಂಧ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಇಂಧನ ಪೂರೈಕೆಗೆ ಎದುರಾಗುವ ಅಡಚಣೆಗಳನ್ನು ನಿವಾರಿಸಲು ಮುಂದಾಗಿದೆ.

ಎಲ್‌ಪಿಜಿ ಉತ್ಪಾದನೆ ಹೆಚ್ಚಿಸುವಂತೆ ಕೇಂದ್ರ ಸರ್ಕಾರ ತೈಲ ರಿಫೈನರಿಗಳಿಗೆ ಸೂಚಿಸಿದೆ. ಗೃಹ ಬಳಕೆಯ ಅಡುಗೆ ಅನಿಲ ಪೂರೈಕೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

ಈ ನಿಟ್ಟಿನಲ್ಲಿ ಸರ್ಕಾರವು 1955ರ ಅಗತ್ಯ ಸರಕುಗಳ ಕಾಯ್ದೆ ಅಡಿಯಲ್ಲಿ ತನಗಿರುವ ಅಧಿಕಾರವನ್ನು ಬಳಸಿಕೊಂಡಿದೆ.

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಬಿಕ್ಕಟ್ಟಿನಿಂದಾಗಿ ಜಾಗತಿಕ ಇಂಧನ ಪೂರೈಕೆಗೆ ತೊಂದರೆ ಉಂಟಾಗಿದೆ. ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ವಾತಾವರಣದಿಂದಾಗಿ ಅಡುಗೆ ಅನಿಲ (ಎಲ್‌ಪಿಜಿ) ಸಿಲಿಂಡರ್‌ಗಳ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಪ್ರಮುಖವಾಗಿಯೂ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ಕೊರತೆಯಿಂದಾಗಿ ಹೋಟೆಲ್, ರೆಸ್ಟೋರೆಂಟ್‌ಗಳು ಸಂಕಷ್ಟಕ್ಕೆ ಸಿಲುಕಿವೆ.

ಭಾರತದಲ್ಲಿ ಎಲ್‌ಪಿಜಿ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಅವರಿಗೆ ಎಲ್‌ಪಿಜಿ ಪೂರೈಕೆಯಲ್ಲಿ ಅಡಚಣೆ ಆಗದಂತೆ ನೋಡಿಕೊಳ್ಳಲು ಸರ್ಕಾರ ಯತ್ನಿಸುತ್ತಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries