ಕೋಲ್ಕತ್ತ: ದಕ್ಷಿಣ ಕೋಲ್ಕತ್ತದ ಕಾಳಿಘಾಟ್‌ನಲ್ಲಿರುವ ಕಾಳಿ ದೇವಾಲಯಕ್ಕೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ಭೇಟಿ ನೀಡಿದ್ದು, ಈ ವೇಳೆ ಅವರ ವಿರುದ್ಧ ಪ್ರತಿಭಟನೆಯ ಕಾವು ಹೆಚ್ಚಾಗಿತ್ತು.
ವಿರೋಧ ಪಕ್ಷದ ಕಾರ್ಯಕರ್ತರು ಜ್ಞಾನೇಶ್ ಕುಮಾರ್ ಅವರಿಗೆ 'ಗೋ ಬ್ಯಾಕ್' ಘೋಷಣೆಗಳನ್ನು ಕೂಗಿದ್ದಾರೆ. ಜತೆಗೆ ಕಪ್ಪು ಬಾವುಟಗಳನ್ನು ಪ್ರದರ್ಶಿಸಿದ್ದಾರೆ.
ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಜ್ಞಾನೇಶ್ ಕುಮಾರ್ ಅವರಿಗೆ ದೇವಾಲಯಕ್ಕೆ ಭೇಟಿ ನೀಡಲು ಅವಕಾಶ ಮಾಡಿಕೊಟ್ಟರು ಎನ್ನಲಾಗಿದೆ.
ಜ್ಞಾನೇಶ್ ಭಾನುವಾರ ರಾತ್ರಿ ಕೋಲ್ಕತ್ತಕ್ಕೆ ಆಗಮನಿಸಿದರು. ಈ ವೇಳೆಯೂ ಅವರ ವಿರುದ್ಧ ಪ್ರತಿಭಟನೆ ನಡೆಸಲಾಯಿತು.
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಮಾಡಲಾಗಿರುವ ಸಿದ್ಧತೆಗಳನ್ನು ಪರಿಶೀಲಿಸಲು ಕೇಂದ್ರ ಚುನಾವಣಾ ಆಯೋಗ ಮುಂದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನೇತೃತ್ವದ ಉನ್ನತಾಧಿಕಾರಿಗಳಿರುವ ತಂಡವು ಸೋಮವಾರ ಹಾಗೂ ಮಂಗಳವಾರ (ಮಾರ್ಚ್ 10) ರಾಜ್ಯದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದೆ.

