HEALTH TIPS

ಪ.ಬಂಗಾಳ ಚುನಾವಣೆ: DJP ಪಾಂಡೆ, ಕೋಲ್ಕತ್ತ ಪೊಲೀಸ್ ಆಯುಕ್ತರನ್ನು ವಜಾಗೊಳಿಸಿದ EC

 ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ವೇಳಾ‍ಪಟ್ಟಿ ನಿಗದಿಯಾದ ಬೆನ್ನಲ್ಲೇ ಚುನಾವಣಾ ಆಯೋಗವು ಡಿಜಿಪಿ ಪೀಯುಷ್ ಪಾಂಡೆ ಮತ್ತು ಕೋಲ್ಕತ್ತ ಪೊಲೀಸ್ ಆಯುಕ್ತ ಸುಪ್ರತಿಮ್ ಸರ್ಕಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದೆ. 


ಪಾಂಡೆ ಅವರ ಬದಲಿಗೆ ಹಿರಿಯ ಐಪಿಎಸ್ ಅಧಿಕಾರಿ ಸಿದ್ಧ್ ನಾಥ್ ಗುಪ್ತಾ ಅವರನ್ನು ಪೊಲೀಸ್ ಮಹಾನಿರ್ದೇಶಕರನ್ನಾಗಿ ಹಾಗೂ ಅಜಯ್ ಕುಮಾರ್ ನಂದ್ ಅವರನ್ನು ಕೋಲ್ಕತ್ತಾ ಪೊಲೀಸ್ ಆಯುಕ್ತರನ್ನಾಗಿ ನೇಮಿಸಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ನಟರಾಜನ್ ರಮೇಶ್ ಬಾಬು ಅವರನ್ನು ತಿದ್ದುಪಡಿ ಸೇವೆಗಳ ಮಹಾನಿರ್ದೇಶಕರನ್ನಾಗಿ ಮತ್ತು ಅಜಯ್ ಮುಕುಂದ್ ರಾನಡೆ ಅವರನ್ನು ಹೆಚ್ಚುವರಿ ಮಹಾನಿರ್ದೇಶಕ ಮತ್ತು ಐಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಆಗಿ ನೇಮಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಮ್ಮ ಸ್ಥಾನಗಳಿಂದ ವರ್ಗಾವಣೆಗೊಂಡವರನ್ನು ಚುನಾವಣೆ ಪೂರ್ಣಗೊಳ್ಳುವವರೆಗೆ ಚುನಾವಣೆಗೆ ಸಂಬಂಧಿಸಿದ ಯಾವುದೇ ಹುದ್ದೆಗಳಲ್ಲಿ ನಿಯೋಜನೆ ಮಾಡಬಾರದು ಎಂದು ಚುನಾವಣಾ ಆಯೋಗ ಹೇಳಿದೆ.

ರಾಜ್ಯದಲ್ಲಿ ಏಪ್ರಿಲ್ 23 ಮತ್ತು 29ರಂದು ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದ್ದು , ಮೇ 4ರಂದು ಫಲಿತಾಂಶ ಹೊರಬೀಳಲಿದೆ.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries