HEALTH TIPS

ಖಮೇನಿ ಹತ್ಯೆಗೆ ಖಂಡನೆ: ಸುಳ್ಳು ಮಾಹಿತಿ ಹಂಚಿಕೊಂಡ ವ್ಯಕ್ತಿಗಳ ವಿರುದ್ಧ FIR

ಶ್ರೀನಗರ: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಖಂಡಿಸಿ ನಡೆಸಿದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಅಶಾಂತಿಯನ್ನು ಪ್ರಚೋದಿಸುವ ಮತ್ತು ಕಾನೂನು ಸುವ್ಯವಸ್ಥೆಗೆ ಭಂಗ ತರುವ ಉದ್ದೇಶದಿಂದ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಿದ ಕೆಲವು ಮಾಧ್ಯಮಗಳು ಮತ್ತು ವ್ಯಕ್ತಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕೆಲವು ಸುದ್ದಿ ವಾಹಿನಿಗಳು, ಮಾಧ್ಯಮಗಳು ಮತ್ತು ವ್ಯಕ್ತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಮತ್ತು ದಾರಿತಪ್ಪಿಸುವ ಮಾಹಿತಿಯನ್ನು ಉದ್ದೇಶಪೂರ್ವಕವಾಗಿ ಪ್ರಸಾರ ಮಾಡಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಶ್ರೀನಗರ ಪೊಲೀಸರು ಖಚಿತಪಡಿಸಿದ್ದಾರೆ.

ಆದಾಗ್ಯೂ, ಮಾಧ್ಯಮಗಳು ಮತ್ತು ವ್ಯಕ್ತಿಗಳ ವಿವರಗಳನ್ನು ಪೊಲೀಸರು ತಕ್ಷಣಕ್ಕೆ ಬಹಿರಂಗಪಡಿಸಿಲ್ಲ.

ದುರುದ್ದೇಶಪೂರಿತ ತಪ್ಪು ಮಾಹಿತಿಯನ್ನು ಪ್ರಸಾರ ಮಾಡುವುದರಿಂದ ದೇಶದ ಶಾಂತಿ, ಭದ್ರತೆ ಮತ್ತು ಸಮಗ್ರತೆಗೆ ಗಂಭೀರ ಬೆದರಿಕೆ ಒಡ್ಡಲಾಗುತ್ತಿದೆ. ಆರೋಪಿಗಳ ವಿರುದ್ಧ ಶ್ರೀನಗರ ಪೊಲೀಸರು ಕಾನೂನು ನಿಬಂಧನೆಗಳ ಅಡಿಯಲ್ಲಿ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

'ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಮಾಹಿತಿ ಹಂಚಿಕೊಂಡಿರುವ ಹಲವು ಪ್ರೊಫೈಲ್‌ಗಳನ್ನು ಗುರುತಿಸಲಾಗಿದ್ದು, ಸಂಬಂಧಪಟ್ಟ ವ್ಯಕ್ತಿಗಳನ್ನು ವಿಚಾರಣೆ ನಡೆಸುತ್ತಿದ್ದೇವೆ. ತಪ್ಪು ಸಾಬೀತಾದರೆ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ' ಎಂದು ಅವರು ಹೇಳಿದ್ದಾರೆ.

'ನಕಲಿ ಸುದ್ದಿ, ಪ್ರಚೋದನಕಾರಿ ವಿಷಯ ಅಥವಾ ಪರಿಶೀಲಿಸದ ಮಾಹಿತಿಯನ್ನು ಹರಡುವುದು ಕಠಿಣ ಕಾನೂನು ಪರಿಣಾಮಗಳಿಗೆ ಕಾರಣವಾಗುತ್ತದೆ. ನಾಗರಿಕರು ಮತ್ತು ಮಾಧ್ಯಮ ಸಂಸ್ಥೆಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಕೋಮು ಸಾಮರಸ್ಯ ಅಥವಾ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಯಾವುದೇ ವಿಷಯವನ್ನು ಹಂಚಿಕೊಳ್ಳುವ ಮೊದಲು ಅಧಿಕೃತ ಮತ್ತು ವಿಶ್ವಾಸಾರ್ಹ ಮೂಲಗಳನ್ನು ಖಚಿಪಡಿಸಿಕೊಳ್ಳಬೇಕು' ಎಂದಿದ್ದಾರೆ.

ಅಮೆರಿಕ ಹಾಗೂ ಇಸ್ರೇಲ್‌ ಸೇನೆಗಳು ಇರಾನ್‌ ಮೇಲಿನ ಸೇನಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಹಲವು ತಾಣಗಳನ್ನು ಗುರಿಯಾಗಿಸಿ ಮಂಗಳವಾರವೂ ಬಾಂಬ್‌ ಹಾಗೂ ಕ್ಷಿಪಣಿ ದಾಳಿ ನಡೆಸಿವೆ. ಇರಾನ್ ಕೂಡಾ ಪ್ರತೀಕಾರದ ದಾಳಿ ಮುಂದುವರಿಸಿರುವುದರಿಂದ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನ ಸ್ಥಿತಿ ಮತ್ತಷ್ಟು ವಿಷಮಗೊಂಡಿದೆ.

ಆಯತೊಲ್ಲಾ ಅಲಿ ಖಮೇನಿ ಹತ್ಯೆ ಖಂಡಿಸಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳನ್ನು ನಡೆಸಲಾಗುತ್ತಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries