ತಿರುವನಂತಪುರಂ: ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ತೀವ್ರ ನಿಗಾ ಘಟಕದ ಬಳಿಯ ಮಲ್ಟಿ-ಸ್ಪೆಷಾಲಿಟಿ ಬ್ಲಾಕ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಪ್ರಾಥಮಿಕ ವರದಿಗಳ ಪ್ರಕಾರ, ಮಲ್ಟಿ-ಸ್ಪೆಷಾಲಿಟಿ ಬ್ಲಾಕ್‌ನ ಶಸ್ತ್ರಚಿಕಿತ್ಸಾ ಐಸಿಯು (Surgery ICU) ಸಮೀಪದಲ್ಲಿ ಬೆಳಿಗ್ಗೆ 9.15ರ ಸುಮಾರಿಗೆ ಘಟನೆ ನಡೆದಿದೆ.
ಈ ವಿಭಾಗದಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ. ಅಗ್ನಿ ಅವಘಡದ ಹಿನ್ನೆಲೆ ರೋಗಿಗಳನ್ನು ತುರ್ತಾಗಿ ಸ್ಥಳಾಂತರಿಸಲಾಗಿದೆ.
ಅಗ್ನಿ ಅವಘಡಕ್ಕೆ ನಿಖರ ಕಾರಣ ದೃಢಪಟ್ಟಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಸಾಧ್ಯತೆ ಇದೆ. ಅಗ್ನಿಶಾಮಕ ದಳದವರು ತಕ್ಷಣ ಸ್ಥಳಕ್ಕೆ ಬಂದು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

