HEALTH TIPS

Madhya Pradesh | 1,025 ಸ್ಥಳಗಳ ಮೇಲೆ ದಾಳಿ; 1,357 LPG ಸಿಲಿಂಡರ್‌ ಗಳ ವಶ

ಬೋಪಾಲ್: ಮಧ್ಯಪ್ರದೇಶದಾದ್ಯಂತ LPG ಸಿಲಿಂಡರ್‌ ಗಳ ಕಾಳಸಂತೆ ಹಾಗೂ ಸಂಗ್ರಹಣೆಯ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಇದುವರೆಗೆ 1,357 ಸಿಲಿಂಡರ್‌ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ರಾಜ್ಯ ಸರ್ಕಾರ ಹೊರಡಿಸಿದ ನಿರ್ದೇಶನಗಳಿಗೆ ಅನುಗುಣವಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ, ಜಿಲ್ಲಾಡಳಿತ ಹಾಗೂ ಪೊಲೀಸರ ತಂಡಗಳು ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ 1,025 ಸ್ಥಳಗಳ ಮೇಲೆ ದಾಳಿ ನಡೆಸಿ 1,357 LPG ಸಿಲಿಂಡರ್‌ ಗಳನ್ನು ವಶಪಡಿಸಿಕೊಂಡಿವೆ.

LPG ಸಿಲಿಂಡರ್‌ ಗಳ ಕಾಳಸಂತೆಯಲ್ಲಿ ತೊಡಗಿದ ಹಾಗೂ ಸಂಗ್ರಹಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡುಬಂದ ವ್ಯಕ್ತಿಗಳ ವಿರುದ್ಧ ಇದುವರೆಗೆ ಒಟ್ಟು 8 ಎಫ್‌ಐಆರ್‌ ಗಳನ್ನು ದಾಖಲಿಸಲಾಗಿದೆ.

ಪೆಟ್ರೋಲ್, ಡೀಸೆಲ್, ಸಿಎನ್ಜಿ, ಪಿಎನ್ಜಿ ಹಾಗೂ ಗೃಹಬಳಕೆಯ LPG ಲಭ್ಯತೆಗೆ ಸಂಬಂಧಿಸಿ ತೈಲ ಕಂಪೆನಿಗಳೊಂದಿಗೆ ಸಮನ್ವಯ ಸಾಧಿಸಲು ರಾಜ್ಯ ಮಟ್ಟದಲ್ಲಿ 6 ಮಂದಿ ಸದಸ್ಯರ ಸಮಿತಿಯನ್ನು ರೂಪಿಸಲಾಗಿದೆ. ಈ ಸಮಿತಿ ರಾಜ್ಯಾದ್ಯಂತ ವಾಣಿಜ್ಯ ಹಾಗೂ ಗೃಹಬಳಕೆಯ ಅನಿಲ ಸಿಲಿಂಡರ್‌ ಗಳ ನಿಯಮಿತ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ನಿರಂತರ ಮೇಲ್ವಿಚಾರಣೆ ನಡೆಸಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries