HEALTH TIPS

NEET UG Registration: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ನವದೆಹಲಿ: ನೀಟ್-ಯುಜಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆಯಾಗಿದೆ. ಅಭ್ಯರ್ಥಿಗಳು ಇದೇ ಮಾರ್ಚ್ 11ರವರೆಗೆ ಅರ್ಜಿ ಸಲ್ಲಿಸಬಹುದು.

ಈ ಮೊದಲು ಮಾರ್ಚ್ 8 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿತ್ತು.

ಅರ್ಜಿ ಸಲ್ಲಿಸಲು ಶುಲ್ಕ ಪಾವತಿಸಲು ಮಾರ್ಚ್ 11ರ ರಾತ್ರಿ 11.50ವರೆಗೆ ಸಮಯ ಇರಲಿದೆ ಎಂದು ನ್ಯಾಷನಲ್ ಟೆಸ್ಟಿಂಗ್ ಏಜನ್ಸಿ (ಎನ್‌ಟಿಎ) ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದೆ.

ಕಳೆದ ಫೆಬ್ರುವರಿ 8 ರಂದು ಅರ್ಜಿ ಸಲ್ಲಿಕೆ ಆರಂಭವಾಗಿತ್ತು. ಕೆಲವು ತಾಂತ್ರಿಕ ಸಮಸ್ಯೆಗಳನ್ನು ಅಭ್ಯರ್ಥಿಗಳು ರಿಪೋರ್ಟ್ ಮಾಡಿದ್ದರಿಂದ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆಯಾಗಿದೆ ಎಂದು ಎನ್‌ಟಿಎ ತಿಳಿಸಿದೆ.

ಮೇ 3 ರಂದು ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಇದು ಸಿಬಿಟಿ ಬದಲು ಪೆನ್ ಆಯಂಡ್ ಪೇಪರ್ ರೂಪದಲ್ಲಿ ಇರಲಿದೆ. ಎಂಬಿಬಿಎಸ್, ಬಿಡಿಎಸ್ ಹಾಗೂ ಇತರ ಆಯುಷ್ ಕೋರ್ಸ್‌ಗಳಿಗೆ ದೇಶದಾದ್ಯಂತ ಒಂದೇ ನೀಟ್ ಯುಜಿ ನಡೆಯುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries