HEALTH TIPS

ಅಸ್ಸಾಂನಲ್ಲಿ ಒಳನುಸುಳುಕೋರರ ರಕ್ಷಿಸಲು SIRಗೆ ರಾಹುಲ್‌ ಗಾಂಧಿ ವಿರೋಧ: ಅಮಿತ್‌ ಶಾ

ಧೇಕಿಯಾಜುಲಿ: ರಾಹುಲ್ ಗಾಂಧಿ ಹಾಗೂ ಅವರ ತಂಡವು ಒಳನುಸುಳುಕೋರರನ್ನು ರಕ್ಷಿಸಲು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು (ಎಸ್‌ಐಆರ್‌) ವಿರೋಧಿಸುತ್ತಿದೆ ಎಂದು ಗೃಹಸಚಿವ ಅಮಿತ್‌ ಶಾ ಆರೋಪಿಸಿದ್ದಾರೆ.

ಸೋನಿತ್‌ಪುರ ಜಿಲ್ಲೆಯ ಧೇಕಿಯಾಜುಲಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ 10 ವರ್ಷಗಳಲ್ಲಿ ಬಿಜೆಪಿ ಸರ್ಕಾರ ಅಸ್ಸಾಂನಲ್ಲಿ ಒಳನುಸುಳುವಿಕೆಯನ್ನು ತಡೆದಿದೆ.

ಆದರೆ ಇದು ಸಾಕಾಗುವುದಿಲ್ಲ. ಏಕೆಂದರೆ ಪ್ರತಿಯೊಬ್ಬ ಅಕ್ರಮ ವಲಸಿಗರನ್ನು ಅವರ ದೇಶಗಳಿಗೆ ವಾಪಸ್ ಕಳುಹಿಸಬೇಕು ಎಂದು ಹೇಳಿದ್ದಾರೆ.

ಅಸ್ಸಾಂ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಗೌರವ್ ಗೊಗೊಯ್ ಅವರು ಒಳನುಸುಳುಕೋರರನ್ನು ರಕ್ಷಿಸಲು ಬಯಸುತ್ತಾರೆ ಎಂದು ಆರೋಪಿಸಿರುವ ಶಾ, ಈ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಬೇಕು ಎಂದಿದ್ದಾರೆ.

ಕಾಂಗ್ರೆಸ್ ತನ್ನ ಆಡಳಿತದ ಅವಧಿಯಲ್ಲಿ ದೇಶದ ಭದ್ರತೆಯನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ಪಾಕಿಸ್ತಾನದ ಭಯೋತ್ಪಾದಕರು ನಮ್ಮ ದೇಶದಲ್ಲಿ ದಾಳಿ ನಡೆಸಲು ಪ್ರೋತ್ಸಾಹಿಸಿತು ಎಂದು ಅವರು ಗಂಭೀರವಾಗಿ ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಭಯೋತ್ಪಾದಕರ ವಿರುದ್ಧ ಕಠಿಣ ನಿಲುವು ತೆಗೆದುಕೊಂಡಿದ್ದಾರೆ ಎಂದು ಶಾ ಹೇಳಿದ್ದಾರೆ.

ಅಸ್ಸಾಂ ಅನ್ನು ಒಳನುಸುಳುವಿಕೆಯಿಂದ ಮುಕ್ತಗೊಳಿಸಲು ಹಾಗೂ ರಾಜ್ಯವನ್ನು ಶಾಂತಿ ಮತ್ತು ಅಭಿವೃದ್ಧಿಯತ್ತ ಮುನ್ನಡೆಸಲು ಮತ್ತೊಮ್ಮೆ ಹಿಮಂತ ಬಿಸ್ವಾ ಶರ್ಮಾ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ ಎಂದು ಜನರಲ್ಲಿ ಶಾ ಮನವಿ ಮಾಡಿದರು.

126 ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ‌ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಹೊರಬೀಳಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries