ನವದೆಹಲಿ: 'ಹೊಸ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ನಿರ್ಮಿಸಲು ಶೇ 100ರಷ್ಟು ಭೂಸ್ವಾಧೀನ ಅಗತ್ಯ. ಇಲ್ಲದಿದ್ದಲ್ಲಿ ಯಾವುದೇ ಹೊಸ ಯೋಜನೆಗಳಿಗೆ ಅನುಮತಿ ನೀಡಲಾಗುವುದಿಲ್ಲ' ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ರಸ್ತೆ ನಿರ್ಮಾಣಕ್ಕೆ ಭೂಸ್ವಾಧೀನ, ಅರಣ್ಯ ಮತ್ತು ಪರಿಸರ ಸಚಿವಾಲಯದಿಂದ ಅನುಮತಿ ಪಡೆಯುವುದು ಹೆದ್ದಾರಿ ಯೋಜನೆಗಳಿಗೆ ಇರುವ ಅತಿದೊಡ್ಡ ಸವಾಲುಗಳಾಗಿವೆ ಎಂದು ಶುಕ್ರವಾರ ಹೇಳಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯ ಹೊಸ ಯೋಜನೆಗಳನ್ನು ನಿರ್ಮಿಸಬೇಕಿದ್ದರೆ ಶೇ 90ರಷ್ಟು ಭೂ ಸ್ವಾಧೀನ ಮಾಡಿಕೊಂಡಿರಬೇಕಿರುವುದು ಕಡ್ಡಾಯವಾಗಿದೆ. ಆದರೆ, ಈ ಪ್ರಮಾಣವನ್ನು ಶೇ 100ಕ್ಕೆ ಹೆಚ್ಚಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

